ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್ ಹಂಚಿಕೆಗೆ ಒಡಂಬಡಿಕೆ
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾ ಗಿತ್ವದಲ್ಲಿ ಕೈಗೆತ್ತಿಕೊಂಡಿರುವ ‘ಶಿಕ್ಷಣಕ್ಕೆ ಸಹಾಯದ (Help Educate) ಉಪಕ್ರಮದ ಅಂಗವಾಗಿ ರಾಜ್ಯದ ಸರ ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಡೆಸ್ಕ್ಟಾಪ್ ಕಂಪ್ಯೂಟರ್ಗಳನ್ನು ನೀಡುವ ಬಗ್ಗೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ.
Published: 26th February 2021 08:37 PM | Last Updated: 26th February 2021 08:37 PM | A+A A-

ಸಿ. ಎನ್. ಅಶ್ವತ್ಥನಾರಾಯಣ
ಬೆಂಗಳೂರು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾ ಗಿತ್ವದಲ್ಲಿ ಕೈಗೆತ್ತಿಕೊಂಡಿರುವ ‘ಶಿಕ್ಷಣಕ್ಕೆ ಸಹಾಯದ (Help Educate) ಉಪಕ್ರಮದ ಅಂಗವಾಗಿ ರಾಜ್ಯದ ಸರ ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಡೆಸ್ಕ್ಟಾಪ್ ಕಂಪ್ಯೂಟರ್ಗಳನ್ನು ನೀಡುವ ಬಗ್ಗೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ.
ಸರ್ಕಾರದ ಈ ಮಹತ್ವಾಕಾಂಕ್ಷೆ ಯೋಜನೆಯ ಅನುಷ್ಠಾನಕ್ಕೆ ನೆರವಾಗುತ್ತಿರುವ @rotary_india, @Cognizant ಸಂಸ್ಥೆಗಳಿಗೆ ಹೃತ್ಪೂರ್ವಕ ಕೃತಜ್ಞತೆಗಳು.
— Dr. Ashwathnarayan C. N. (@drashwathcn) February 26, 2021
ಗ್ರಾಮೀಣ ಪ್ರದೇಶಗಳಲ್ಲಿ 'ಡಿಜಿಟಲ್ ಅಂತರ'ದ ಕಾರಣಕ್ಕಾಗಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ತೊಡಕಾಗದಿರಲಿ ಎಂಬುದು ಈ ಉಪಕ್ರಮದ ಸದುದ್ದೇಶವಾಗಿದೆ.@CMofKarnataka @KarnatakaVarthe
2/2
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಪರಿಕಲ್ಪನೆಯಂತೆ ಈ ಒಪ್ಪಂದ ಆಗಿದ್ದು,ನಗರ-ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ನಡುವೆ ಡಿಜಿಟಲ್ ಅಂತರವನ್ನು ಆಳಿಸಿಹಾಕಲು ಈ ಉಪಕ್ರಮ ಪೂರಕ ವಾಗಲಿದೆ.ಈ ಕುರಿತು ತಿಳುವಳಿಕೆ ಪತ್ರಕ್ಕೆ ಶುಕ್ರವಾರ ಉಪ ಮುಖ್ಯಮಂತ್ರಿಗಳ ಸಮಕ್ಷಮದಲ್ಲಿ ಸಹಿ ಹಾಕಲಾಗಿ ದ್ದುಇದರಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ),ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂ ಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ರೋಟರಿ ಕ್ಲಬ್ ವೈಟ್ಫೀಲ್ಡ್ ಸೆಂಟ್ರಲ್ (ಜಿಲ್ಲೆ 1390)ವತಿಯಿಂದ ಸಹಿ ಮಾಡಿದರು.
ಈ ಉಪಕ್ರಮವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಮತ್ತು ವಿದ್ಯಾರ್ಥಿಗಳ ಕಲಿಕೆಯಲ್ಲಿ ಬದಲಾವಣೆ ತರುವ ಪ್ರಮುಖ ಉದ್ದೇಶವನ್ನು ಹೊಂದಿದೆ, ಇದರಲ್ಲಿ ಹೆಚ್ಚಿನವರು ಸಾಮಾಜಿಕ-ಆರ್ಥಿಕ ಹಿಂದುಳಿದ ವರ್ಗದವರಿದ್ದಾರೆ. “ಸಹಾಯ ಶಿಕ್ಷಣ” ಉಪಕ್ರಮದಡಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಎಂಎನ್ಸಿಗಳು ಮತ್ತು ಉದಾರ ಸಹಾಯಕರ ಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ತರಬೇತಿ ನೀಡಲು ಆಧುನಿಕ, ತರಬೇತಿಪಡೆದ ಪ್ರಾಧ್ಯಾಪಕರು ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂಗಳು ಮತ್ತು ಡಿಜಿಟಲ್ ಬೋಧನೆಯ ಮೂಲಕ ವಿಧಾನ ಮತ್ತು ಡಿಜಿಟಲ್ ಕಲಿಕೆಯನ್ನು ಅಳವಡಿಸಿಕೊಳ್ಳಲು ಸರ್ಕಾರಿ ಕಾಲೇಜುಗಳನ್ನು ಡಿಜಿಟಲ್ ಸ್ವತ್ತುಗಳೊಂದಿಗೆ ಸಜ್ಜುಗೊಳಿಸುವುದು ಇತ್ತೀಚಿನ ಪ್ರವೃತ್ತಿ ಮತ್ತು ಸಮಯದ ಉಲ್ಲಂಘಿಸಲಾಗದ ಅವಶ್ಯಕತೆಯಾಗಿದೆ ” ಉನ್ನತ ಶಿಕ್ಷಣ ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
“ಸರ್ಕಾರಿ ಕಾಲೇಜುಗಳಿಗೆ ಸುಮಾರು 30,000 ಕಂಪ್ಯೂಟರ್ಗಳು ಬೇಕಾಗುತ್ತವೆ ಮತ್ತು ಈಗ 12,500 ಕಂಪ್ಯೂಟರ್ಗಳನ್ನು ಒದಗಿಸಲಾಗಿದೆ. ಸುಮಾರು 50 ಕೋಟಿ ರೂಪಾಯಿಗಳ ಈ ಕೊಡುಗೆ ವಿದ್ಯಾರ್ಥಿಗಳ ಡಿಜಿಟಲ್ ಅಗತ್ಯವನ್ನು ಪೂರೈಸಲು ಸಹಾಯ ಮಾಡುತ್ತದೆ. ”
ಉಪಕ್ರಮದ ಭಾಗವಾಗಿ, ಕಾಗ್ನಿಜೆಂಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಲಾಖೆಗೆ 12,500 ಡಿ-ಬಾಂಡೆಡ್, ಡೆಸ್ಕ್ಟಾಪ್ ಕಂಪ್ಯೂಟರ್ಗಳನ್ನು ಒದಗಿಸಲು ಉದ್ದೇಶಿಸಿದ್ದು ವಿದ್ಯಾರ್ಥಿಗಳ ಬಳಕೆಗಾಗಿ ಕಂಪ್ಯೂಟರ್ ಲ್ಯಾಬ್ಗಳನ್ನು ಸ್ಥಾಪಿಸಲು ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕ್ರಮ ತೆಗೆದುಕೊಳ್ಲಲಾಗುವುದು. ರೋಟರಿ ಕ್ಲಬ್, ಬೆಂಗಳೂರು ವಿಂಡೋಸ್ ಓಎಸ್ ಮತ್ತು ಆಫೀಸ್ 365 ಅನ್ನು ಸ್ಥಾಪಿಸಲು ಮತ್ತು ಈ ಡೆಸ್ಕ್ಟಾಪ್ಗಳನ್ನು ಆಯಾ ಸ್ಥಳಗಳಿಗೆ ಸಾಗಿಸಲು ಮತ್ತು ಸ್ಥಾಪಿಸಲು ನಿರ್ಧರಿಸಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಪೂರಕ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡೆ.
— Dr. Ashwathnarayan C. N. (@drashwathcn) February 26, 2021
ಉತ್ತಮ ತರಬೇತಿಗಾಗಿ ಹಾಗೂ ಮೂಲಭೂತ ಸೌಕರ್ಯಗಳನ್ನು ಉನ್ನತಗೊಳಿಸಿ ಈ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕಟ್ಟಡ ನಿರ್ಮಾಣವಾಗಲಿದೆ. pic.twitter.com/Ww7Cb3ncX2
ಕಾಗ್ನಿಜಂಟ್ ಬೆಂಗಳೂರು ಕೇಂದ್ರದ ಮುಖ್ಯಸ್ಥ ನವೀನ್ ರಾವ್, ಕಾಲೇಜಿಯೇಟ್ ಶಿಕ್ಷಣ ಇಲಾಖೆಯ ನೇತೃತ್ವದ ಈ ನಿರ್ಣಾಯಕ ಉಪಕ್ರಮದ ಭಾಗವಾಗಿರುವುದಕ್ಕೆ ಕಂಪನಿಯು ಹೆಮ್ಮೆ ಪಡುತ್ತದೆಎಂದು ಹೇಳಿದರು.ಉದ್ಯೋಗಿಗಳನೇತೃತ್ವದ ಸ್ವಯಂಸೇವಕ ಕಾರ್ಯಕ್ರಮವಾದ ಕಾಗ್ನಿಜೆಂಟ್ ರಿಟ್ರೀಚ್ ನ “ಡಿಜಿಟಲ್ ಸೇರ್ಪಡೆ” ಉಪಕ್ರಮದ ಅಡಿಯಲ್ಲಿ, ಕಂಪನಿಯು ಭಾರತದಾದ್ಯಂತ ಶಾಲೆಗಳು, ಶಿಕ್ಷಣ ಸಂಸ್ಥೆಗಳು, ಸಮುದಾಯ ಗ್ರಂಥಾಲಯಗಳು ಮತ್ತು ಇತರ ಸಂಸ್ಥೆಗಳಿಗೆ ಕಂಪ್ಯೂಟರ್ ಮೂಲಸೌಕರ್ಯ ಒದಗಿಸುತ್ತಿದೆ ಎಂದು ಅವರು ಇದೇ ಸಮಯದಲ್ಲಿ ತಿಳಿಸಿದ್ದಾರೆ.
ಶೀಘ್ರದಲ್ಲಿಯೇ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ
ತಂತ್ರಜ್ಞಾನ ಬೆಳೆದಂತೆಲ್ಲ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಎಲ್ಲ ಕ್ರ ಮಗಳನ್ನು ಸರಕಾರ ಕೈಗೊಂಡಿದ್ದು,ಶೀಘ್ರದಲ್ಲಿಯೇ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ (engineering R&D policy )ಯನ್ನು ಜಾರಿಗೆ ತರಲಾಗುತ್ತಿದ್ದು,ಮಾರ್ಚ್ 2ರಂದು ಘೋಷಣೆ ಮಾಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ನಗರದ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ನೂತನ ಪೂರಕ ಕಟ್ಟಡ ನಿ ರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರೆವೇರಿಸಿ ಮಾತನಾಡಿದ ಅವರು,ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ನಾವು ದೇಶದಲ್ಲೇ ಮುಂಚೂಣಿಯಲ್ಲಿದ್ದೇವೆ.ಹೀಗಾಗಿ ಹೊಸ ನೀತಿಯನ್ನು ರೂಪಿಸಲಾ ಗುತ್ತಿದೆ.ಆ ನೀತಿ ಬಂದ ನಂತರ ಈ ಕ್ಷೇತ್ರದಲ್ಲೂ ಕ್ರಾಂತಿಕಾರಕ ಬದಲಾವಣೆಗಳು ಆಗುತ್ತವೆ ಎಂದರು.
The new policy will help industry further scale up their ER&D presence.@ITBTGoK @CMofKarnataka
— Dr. Ashwathnarayan C. N. (@drashwathcn) February 26, 2021
2/2