ಕೊರೋನಾಗೆ ಕರ್ನಾಟಕ ಮತ್ತೆ ತತ್ತರ: ಬೆಂಗಳೂರಿನಲ್ಲಿ 368 ಸೇರಿ ರಾಜ್ಯದಲ್ಲಿ 571 ಪ್ರಕರಣ ಪತ್ತೆ!

ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗುತ್ತಿದ್ದು ಇಂದು 571 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,50,207ಕ್ಕೆ ಏರಿಕೆಯಾಗಿದೆ.

Published: 26th February 2021 08:06 PM  |   Last Updated: 26th February 2021 08:07 PM   |  A+A-


Covid-19 test-2

ಕೋವಿಡ್-19 ಪರೀಕ್ಷೆ (ಸಂಗ್ರಹ ಚಿತ್ರ)

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗುತ್ತಿದ್ದು ಇಂದು 571 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,50,207ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,320ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 368 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,04,996ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 642 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,32,367ಕ್ಕೆ ಏರಿಕೆಯಾಗಿದೆ. ಇನ್ನು 6,501 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 121 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp