ಶೀಘ್ರದಲ್ಲೇ ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ: ಸಚಿವ ಲಕ್ಷ್ಮಣ್ ಸವದಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿಗಳೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. 

Published: 26th February 2021 08:03 AM  |   Last Updated: 26th February 2021 08:03 AM   |  A+A-


Laxman Savadi

ಸಾರಿಗೆ ಸಚಿವ ಲಕ್ಷ್ಮಣ್ ಸವದಿ

Posted By : Manjula VN
Source : The New Indian Express

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿಗಳೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಬಿಎಂಟಿಸಿ ಹೊರತುಪಡಿಸಿ ಉಳಿದ ಮೂರು ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.12ರಷ್ಟು ಹೆಚ್ಚಳ ಮಾಡಲಾಗಿತ್ತು. ಆದರೆ, ಬಿಎಂಟಿಸಿ ಪ್ರಯಾಣ ದರ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಈ ಬಾರಿ ಶೇ.20ರಷ್ಟು ಹೆಚ್ಚಿಸುವಂತೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಂತರ ಅಂತಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

ಕೊರೋನಾ ಸಾಂಕ್ರಾಮಿಕ ರೋಗ ಹಾಗೂ ತೈಲ ಬೆಲೆ ಏರಿಕೆಯಿಂದಾಗಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಸಾಕಷ್ಟು ನಷ್ಟವನ್ನು ಎದುರಿಸುತ್ತಿದೆ. ನಾಲ್ಕು ನಿಗಮಗಳಿಗೆ ಸಾಂಕ್ರಾಮಿಕ ರೋಗದಿಂದ ರೂ.2,720 ಕೋಟಿ ನಷ್ಟ ಎದುರಿಸುತ್ತಿದೆ. ಲಾಕ್ಡೌನ್ ಸಂದರ್ಭದಲ್ಲಿ ಬಸ್ ಸೇವೆಗಳು ಸ್ಥಗಿತಗೊಂಡಿತ್ತು. ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಆಯ್ಕೆ ನೀಡಿದ್ದು, ಇದೀಗ ಬಿಎಂಟಿಸಿ ವೋಲ್ವೋ ಬಸ್ ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಆಟೋ ಮತ್ತು ಸಿಟಿ ಟ್ಯಾಕ್ಸಿಗಳ ಪ್ರಯಾಣ ದರವನ್ನು ಶೇ.15ರಷ್ಟು ಏರಿಕೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ ಓಲಾ, ಉಬರ್ ಟ್ಯಾಕ್ಸಿಗಳ ದರ ಏರಿಕೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ. 

ಈ ನಡುವೆ ಪ್ರಯಾಣ ದರ ಹೆಚ್ಚಳ ಮಾಡುವ ಬಿಎಂಟಿಸಿ ಆಗ್ರಹವನ್ನು ಸರ್ಕಾರ ಈಡೇರಿಸುವ ಲಕ್ಷಣಗಳಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. 

ಈ ವರ್ಷ ಬಿಬಿಎಂಟಿ ಚುನಾವಣೆ ಇದ್ದು, ಪ್ರಯಾಣ ದರ ಹೆಚ್ಚಳ ಮಾಡಿದ್ದೇ ಅದರೆ, ಚುನಾವಣೆಯಲ್ಲಿ ಬಿಜೆಪಿಗೆ ಹೊಡೆತ ಬೀಳುವ ಸಾಧ್ಯತೆ. ಪ್ರಮುಖವಾಗಿ ತೈಲ ಬೆಲೆ ಏರಿಕೆ ಕುರಿತಂತೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದರಿಂದ ಇಂತಹ ನಿರ್ಧಾರಗಳು ಬಿಜೆಪಿಗೆ ಹಿನ್ನಡೆಯನ್ನುಂಟು ಮಾಡುವ ಸಾಧ್ಯತೆಗಳಿದ್ದು, ಸರ್ಕಾರ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎನ್ನಲಾಗುತ್ತಿದೆ. 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp