ಮಹಾರಾಷ್ಟ್ರ, ಕೇರಳದ ಬಸ್‌ ಗಳಿಗೆ ನಿರ್ಬಂಧ ಇಲ್ಲ, ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಸಚಿವ ಸವದಿ

ಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಯಾವುದೇ ಬಸ್ ಗಳನ್ನು ನಿರ್ಬಂಧಿಸಿಲ್ಲ... ಆದರೆ ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿರಬೇಕು ಎಂದು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

Published: 26th February 2021 03:10 PM  |   Last Updated: 26th February 2021 04:41 PM   |  A+A-


Laxman Savadi

ಲಕ್ಷ್ಮಣ್ ಸವದಿ

Posted By : Srinivasamurthy VN
Source : ANI

ಬೆಂಗಳೂರು: ಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಯಾವುದೇ ಬಸ್ ಗಳನ್ನು ನಿರ್ಬಂಧಿಸಿಲ್ಲ... ಆದರೆ ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿರಬೇಕು ಎಂದು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಂತ್ ರಾಜ್ಯ ಬಸ್ ಸಂಚಾರದ (ಮಹಾರಾಷ್ಟ್ರ, ಕೇರಳ) ಕುರಿತು ರಾಜ್ಯ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಪ್ರವೇಶಿಸುವ ಯಾವುದೇ ಬಸ್‌ಗಳನ್ನು ತಡೆಯುವಂತಿಲ್ಲ. ಆದರೆ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ತಮ್ಮೊಂದಿಗೆ ಕೊರೊನಾ ಪರೀಕ್ಷಾ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ಜೊತೆಗೆ ಪ್ರಯಾಣಿಕರು ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದೂ ಸವದಿ ಸ್ಪಷ್ಟಪಡಿಸಿದ್ದಾರೆ. 

ಇನ್ನು ಮಹಾರಾಷ್ಟ್ರ, ಕೇರಳದಲ್ಲಿ  ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಸೋಂಕು ಪ್ರಕರಣಗಳು ಏರಿಕೆಯಾದ ಹಿನ್ನೆಲೆಯಲ್ಲಿ ಈಚೆಗೆ ಕರ್ನಾಟಕ-ಕೇರಳ ಗಡಿ ಬಂದ್ ಮಾಡಿದ್ದ ಸಂಗತಿ ಆಕ್ಷೇಪಕ್ಕೆ ಕಾರಣವಾಗಿತ್ತು. ಗಡಿಗಳನ್ನು ಬಂದ್ ಮಾಡಿ, ವಾಹನಗಳಿಗೆ ನಿರ್ಬಂಧ ಹೇರಿರುವುದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ಷೇಪ ವ್ಯಕ್ತಪಡಿಸಿದ್ದರು. ಕರ್ನಾಟಕ ಸರ್ಕಾರ ಕೇಂದ್ರ ಗೃಹ ಇಲಾಖೆ ಮಾರ್ಗಸೂಚಿ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದರು. ಇದಕ್ಕೆ ಸ್ವತಃ ಸಾರಿಗೆ ಸಚಿವರು ಸ್ಪಷ್ಟನೆ ನೀಡಿದ್ದರು.
 

Stay up to date on all the latest ರಾಜ್ಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp