ಕೊರೋನಾಗೆ ಕರ್ನಾಟಕ ಮತ್ತೆ ತತ್ತರ: ಬೆಂಗಳೂರಿನಲ್ಲಿ 329 ಸೇರಿ ರಾಜ್ಯದಲ್ಲಿ 523 ಪ್ರಕರಣ ಪತ್ತೆ!

ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗುತ್ತಿದ್ದು ಇಂದು 523 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,50,730ಕ್ಕೆ ಏರಿಕೆಯಾಗಿದೆ.

Published: 27th February 2021 07:40 PM  |   Last Updated: 27th February 2021 07:43 PM   |  A+A-


COVID-19 Positive cases

ಕೊರೋನಾ ಪ್ರಕರಣಗಳು

Posted By : Srinivas Rao BV
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗುತ್ತಿದ್ದು ಇಂದು 523 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,50,730ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,326ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 329 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,05,325ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಐವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 380 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,32,747ಕ್ಕೆ ಏರಿಕೆಯಾಗಿದೆ. ಇನ್ನು 5,638 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 121 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp