ಹೊಸಪೇಟೆ ನ್ಯಾಯಾಲಯ ಆವರಣದಲ್ಲಿ ವಕೀಲನ ಬರ್ಬರ ಹತ್ಯೆ
ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ತರಿಹಳ್ಳಿ ವೆಂಕಟೇಶ್ ಅವರನ್ನು ಶನಿವಾರ ಹೊಸಪೇಟೆಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಕೊಲೆ ಮಾಡಲಾಗಿದೆ.
Published: 27th February 2021 05:09 PM | Last Updated: 27th February 2021 05:10 PM | A+A A-

ಸಾಂದರ್ಭಿಕ ಚಿತ್ರ
ವಿಜಯನಗರ: ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ತರಿಹಳ್ಳಿ ವೆಂಕಟೇಶ್ ಅವರನ್ನು ಶನಿವಾರ ಹೊಸಪೇಟೆಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಕೊಲೆ ಮಾಡಲಾಗಿದೆ.
ಕೊಲೆಯಾದ ವಕೀಲರನ್ನು ತರಿಹಳ್ಳಿ ವೆಂಕಟೇಶ್(48) ಎಂದು ಗುರುತಿಸಲಾಗಿದೆ.
ವೆಂಕಟೇಶ್ ನ್ಯಾಯಾಲಯದ ಆವರಣದಲ್ಲಿದ್ದಾಗ ಆತನ ಸಂಬಂಧಿ ಮನೋಜ್, ಮತ್ತಿತರರು ಮಾರಣಾಂತಿಕ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.