ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಡಿಸಿಎಂ ಸಚಿವ ಲಕ್ಷ್ಮಣ್ ಸವದಿ

ಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.

Published: 27th February 2021 02:32 PM  |   Last Updated: 27th February 2021 02:32 PM   |  A+A-


Laxmana savadi

ಲಕ್ಷ್ಮಣ ಸವದಿ

Posted By : Vishwanath S
Source : UNI

ವಿಜಯಪುರ: ಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸಲಾಗಿದೆ. ಕೊರೋನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ.

ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡುವ ಪ್ರಸ್ತಾವನೆಯೇ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.  ಬಿಎಂಟಿಸಿ ಬಸ್ ದರ ಶೇಕಡ 18ರಷ್ಟು ಹೆಚ್ಚು ಮಾಡಲು ಗಂಭೀರ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದ್ದು ಇದರ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ಮಾಡಲಿದ್ದಾರೆ ಎಂದೂ ಸಚಿವರು ಈ ಮೊದಲು ಹೇಳಿದ್ದರು.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp