3500 ಕೋಟಿ ರೂ.ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಡಿಪಿಆರ್ ಸಿದ್ಧಪಡಿಸಲು ಸೂಚನೆ- ಕಾರಜೋಳ
2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.
Published: 28th February 2021 10:00 PM | Last Updated: 28th February 2021 10:00 PM | A+A A-

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ
ಗೋಕಾಕ್: 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.
ಗೋಕಾಕ್ ನಲ್ಲಿಂದು ಜಲಸಂಪನ್ಮೂಲ ಸಚಿವರೊಂದಿಗೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಈಗಾಗಲೇ ಈ ಪ್ರಸ್ತಾವನೆಯ ಅನುಮೋದನೆ ಪಡೆಯಲಾಗಿದ್ದು, ಡಿಪಿಆರ್ ಸಿದ್ದಪಡಿಸುವಂತೆ ಸೂಚಿಸಲಾಗಿದೆ ಎಂದರು.
ಈ ವರ್ಷದಲ್ಲಿ ಒಟ್ಟಾರೆ 25000 ಕಿ.ಮೀ ರಸ್ತೆಯನ್ನು ಮೇಲ್ದರ್ಜೆಗೇರಿಸಲಾಗಿದ್ದು, ಅದರಲ್ಲಿ 15510ಕಿ.ಮೀ ಗ್ರಾಮೀಣ ರಸ್ತೆಗಳನ್ನು ಎಂಡಿಆರ್ ಗೆ ಹಾಗೂ 9601ಕಿ.ಮೀ ಎಂಡಿಆರ್ ರಸ್ತೆ ಗಳನ್ನು ರಾಜ್ಯಹೆದ್ದಾರಿಗೆ ಮೇಲ್ದರ್ಜೆಗೇರಿಸಲಾಗಿದೆ.ಬೆಳಗಾವಿ ಜಿಲ್ಲೆಯ 892ಕಿ.ಮೀ ಗ್ರಾಮೀಣ ರಸ್ತೆಗಳನ್ನು ಎಂಡಿಆರ್ ಗೆ ಹಾಗೂ 555 ಕಿ.ಮೀ ಎಂಡಿಆರ್ ರಸ್ತೆಗಳನ್ನು ರಾಜ್ಯ ಹೆದ್ದಾರಿಗೆ ಮೇಲ್ದರ್ಜೇಗೇರಿಸಲಾಗಿದೆ ಎಂದು ಅವರು ತಿಳಿಸಿದರು.