ಉಪ ಚುನಾವಣೆ: ನಾಲ್ಕು ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆಯಿಲ್ಲ-ಯಡಿಯೂರಪ್ಪ

ಮುಂದಿನ ದಿನಗಳಲ್ಲಿ ಉಪಚುನಾವಣೆ ನಡೆಯುವ ನಾಲ್ಕು ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

Published: 28th February 2021 08:17 PM  |   Last Updated: 28th February 2021 08:17 PM   |  A+A-


CMBSYediyurappa1

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Posted By : Nagaraja AB
Source : UNI

ಬೆಂಗಳೂರು: ಮುಂದಿನ ದಿನಗಳಲ್ಲಿ ಉಪಚುನಾವಣೆ ನಡೆಯುವ ನಾಲ್ಕು ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಶಿವಮೊಗ್ಗಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ.ಈಗಾಗಲೇ ಉಪಚುನಾವಣೆ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಉಪಚುನಾವಣೆಗಳಲ್ಲಿ ನೂರಕ್ಕೆ ನೂರು ನಾವೇ ಗೆಲ್ಲುತ್ತೇವೆ ಎಂದರು.

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಕಾರ್ಯಕ್ರಮ ಇದೆ.ಸೊರಬದಿಂದ ಶಿವಮೊಗ್ಗಕ್ಕೆ ಬಂದು ಸಮಾರಂಭದಲ್ಲಿ ಭಾಗವಹಿಸುತ್ತೇನೆ. ನಾಳೆ ಬೆಂಗಳೂರಿಗೆ ವಾಪಸ್ ಬರುತ್ತೇನೆ. ಈಗಾಗಲೇ ಬಜೆಟ್ ಸಂಬಂಧಿಸದಂತೆ ಎಲ್ಲ ಚರ್ಚೆ ಮುಗಿದಿದೆ.ನಾಳೆ ಬಜೆಟ್ ಸಿದ್ಧತೆ ಅಂತಿಮಗೊಳಿಸುತ್ತೇನೆ ಎಂದರು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp