ಡಿಕೆ ಶಿವಕುಮಾರ್ ಹೆಸರಲ್ಲಿ ವಂಚನೆ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಉಚ್ಚಾಟನೆ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

Published: 28th February 2021 12:12 PM  |   Last Updated: 28th February 2021 12:12 PM   |  A+A-


ಪೂರ್ಣಿಮಾ ಸವದತ್ತಿ

Posted By : Raghavendra Adiga
Source : Online Desk

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಡಿಕೆ ಶಿವಕುಮಾರ್ ಕಪ್ಪು ಹಣದಿಂದ ಕಡಿಮೆ ಬಡ್ಡಿಯಲ್ಲಿ ಸಾಲ ನೀಡುತ್ತೇನೆ ಎಂದು ಜನರನ್ನು ನಂಬಿಸಿ ಅವರಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದ ಪೂರ್ಣಿಮಾ ಬಳಿಕ ಪರಾರಿಯಾಗಿದ್ದರು.

ತನಗೆ ಹತ್ತು ಸಾವಿರ ರೂ. ನೀಡಿದರೆ ಸಾಲ ನೀಡುವೆ ಎಂದು ನಂಬಿಸಿ ವಂಚಿಸುತ್ತಿದ್ದ ಪೂರ್ಣಿಮಾ ವಿರುದ್ಧ ಹಲವರು ಪೋಲೀಸರಿಗೆ ದೂರು ಸಲ್ಲಿಸಿದ್ದರು.

ಪೂರ್ಣಿಮಾ ಕೇವಲ ಡಿಕೆಶಿ ಹೆಸರು ಮಾತ್ರವೇ ಅಲ್ಲದೆ ಶಾಸಕರಾದ ಪ್ರಕಾಶ್ ಅಬ್ಬಯ್ಯ ಹೆಸರು ಬಳಸಿ ಸಹ ವಂಚಿಸಿದ್ದರು ಎನ್ನಲಾಗಿದ್ದು "ನಾನು ಕೆಪಿಸಿಸಿ ಕಚೇರಿಯಿಂದ ಕರೆ ಮಾಡಿದ್ದೇನೆ, ನನಗೆ ಹತ್ತು ಸಾವಿರ ನೀಡಿದರೆ ಡಿಕೆಶಿ ಅವರ ಕಪ್ಪು ಹಣದಿಂದ ನಿಮಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತೇನೆ" ಎಂದು ಪೂರ್ಣಿಮಾ ಜನರಿಗೆ ನಂಬಿಸುತ್ತಿದ್ದರು ಎಂದು ತಿಳಿದುಬಂದಿದೆ. 

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp