ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಧಾನಿ ಮೋದಿಗೆ ಮನವರಿಕೆ ಮಾಡಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಸಲಹೆ 

ಅಂತರರಾಜ್ಯ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮಾಡಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಬೇಕು ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ.

Published: 28th February 2021 07:55 AM  |   Last Updated: 28th February 2021 07:55 AM   |  A+A-


H D Deve Gowda

ಹೆಚ್ ಡಿ ದೇವೇಗೌಡ

Posted By : Sumana Upadhyaya
Source : The New Indian Express

ಬೆಂಗಳೂರು: ಅಂತರರಾಜ್ಯ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮಾಡಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಬೇಕು ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ.

ಹೆಚ್ಚುವರಿ 45 ಟಿಎಂಸಿ ಕಾವೇರಿ ನದಿ ನೀರನ್ನು ಬಳಸಿ ತನ್ನ ಉದ್ದೇಶಿತ ಯೋಜನೆಗಳನ್ನು ಮುಂದುವರಿಸುವುದಕ್ಕೆ ತಮಿಳು ನಾಡನ್ನು ನಿಲ್ಲಿಸಿ ಕರ್ನಾಟಕ ಈ ವಿವಾದವನ್ನು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ನಡೆಸಲು ಮುಂದಾಗಿದೆ.

ನಾವು ಸುಪ್ರೀಂ ಕೋರ್ಟ್ ಗೆ ಹೋಗಿ ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು ಮತ್ತು ಕರ್ನಾಟಕಕ್ಕೆ ಆಗಿರುವ ಅನ್ಯಾಯ ಕುರಿತು ಪ್ರಧಾನ ಮಂತ್ರಿಗಳಿಗೆ ರಾಜ್ಯ ಸರ್ಕಾರ ಮನವರಿಕೆ ಮಾಡಬೇಕು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡುತ್ತಾ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ತಮಿಳು ನಾಡಿನ ಉದ್ದೇಶಿತ ಯೋಜನೆ ಬಗ್ಗೆ ಮಾತನಾಡಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋದರೆ ಹೆಚ್ಚು ಪ್ರಯೋಜನವಾಗದು ಎಂದು ಹೇಳಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ, ಹೀಗಾಗಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಲು ರಾಜ್ಯ ಸರ್ಕಾರ ಮೋದಿಯವರಿಗೆ ಮನದಟ್ಟು ಮಾಡಬೇಕು ಎಂದು ಒತ್ತಾಯಿಸಿದರು.

Stay up to date on all the latest ರಾಜ್ಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp