ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಸಚಿವ ಪ್ರಭು ಚವ್ಹಾಣ್ ಸೂಚನೆ

ಹಾಸನ ಜಿಲ್ಲೆ ಅರಸಿಕೆರೆಯಲ್ಲಿ ೪ ರಿಂದ ೫ ಕಸಾಯಿಖಾನೆಗಳು ಅನಧಿಕೃತ ವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು ಇವುಗಳ ವಿರುದ್ದ ಕ್ರಮಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ

Published: 28th February 2021 12:17 AM  |   Last Updated: 28th February 2021 12:17 AM   |  A+A-


Prabhu_Chauhan1

ಸಚಿವ ಪ್ರಭು ಚವ್ಹಾಣ್

Posted By : Nagaraja AB
Source : UNI

ಹಾಸನ: ಹಾಸನ ಜಿಲ್ಲೆ ಅರಸಿಕೆರೆಯಲ್ಲಿ ೪ ರಿಂದ ೫ ಕಸಾಯಿಖಾನೆಗಳು ಅನಧಿಕೃತ ವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು ಇವುಗಳ ವಿರುದ್ದ ಕ್ರಮಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್  ತಿಳಿಸಿದ್ದಾರೆ

ಅರಸಿಕೆರೆ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಸಂಗ್ರಹ ಮಾಡಿದ ಸುಮಾರು ೧ಟನ್ ಗೋ ಮಾಂಸವನ್ನು ಪೊಲೀಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವುದು ನನ್ನ ಗಮನಕ್ಕೆ ಬಂದಿದೆ,  ಅಲ್ಲದೇ ಅನಧಿಕೃತವಾಗಿ ಮೂಳೆಗಳ ಸಂಗ್ರಹಣೆ ಮಾಡಿರುವುದು ತಿಳಿದು ಬಂದಿದೆ.

ಯಾವುದೇ ಮುಲಾಜಿಲ್ಲದೆ ತಪ್ಪಿತಸ್ಥರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp