
ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು: ಇಂದು (ಫೆಬ್ರವರಿ 28)ರಾಷ್ಟ್ರೀಯ ವಿಜ್ಞಾನ ದಿನ. ಈ ಸಂದರ್ಭ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
'ಎಲ್ಲ ವಿಜ್ಞಾನಾಸಕ್ತರಿಗೂ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳು. ನಮ್ಮ ಎಲ್ಲ ವಿಜ್ಞಾನಿಗಳ ಸಾಧನೆಗಳಿಗೆ ಅಭಿನಂದನೆಗಳನ್ನು ಸಲ್ಲಿಸುವ ಜೊತೆಗೆ ಯುವ ವಿಜ್ಞಾನಿಗಳಿಂದ ದೇಶಕ್ಕೆ ಮತ್ತಷ್ಟು ಸೇವೆ ಸಲ್ಲಲಿ ಎಂದು ಹಾರೈಸುತ್ತೇನೆ. ನಮ್ಮ ವಿಜ್ಞಾನಿಗಳು ನಮ್ಮ ಹೆಮ್ಮೆ. ಜೈ ವಿಜ್ಞಾನ್!' : ಮುಖ್ಯಮಂತ್ರಿ @BSYBJP.#NationalScienceDay pic.twitter.com/0im4PD4bCH
— CM of Karnataka (@CMofKarnataka) February 28, 2021
"ಎಲ್ಲ ವಿಜ್ಞಾನಾಸಕ್ತರಿಗೂ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳು. ನಮ್ಮ ಎಲ್ಲ ವಿಜ್ಞಾನಿಗಳ ಸಾಧನೆಗಳಿಗೆ ಅಭಿನಂದನೆಗಳನ್ನು ಸಲ್ಲಿಸುವ ಜೊತೆಗೆ ಯುವ ವಿಜ್ಞಾನಿಗಳಿಂದ ದೇಶಕ್ಕೆ ಮತ್ತಷ್ಟು ಸೇವೆ ಸಲ್ಲಲಿ ಎಂದು ಹಾರೈಸುತ್ತೇನೆ. ನಮ್ಮ ವಿಜ್ಞಾನಿಗಳು ನಮ್ಮ ಹೆಮ್ಮೆ. ಜೈ ವಿಜ್ಞಾನ್!" ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬರೆದುಕೊಂಡಿದ್ದಾರೆ.
ನೊಬೆಲ್ ಪ್ರಶಸ್ತಿ ವಿಜೇತ ಸರ್ ಸಿ.ವಿ. ರಾಮನ್ 1928,ಫೆಬ್ರವರಿ 28ರಂದು ತಮ್ಮ ಮಹತ್ವದ "ರಾಮನ್ ಪರಿಣಾಮ" ಸಂಶೋಧನೆಯನ್ನು ಬಹಿರಂಗಪಡಿಸಿದ್ದರು. ಇದರ ನೆನಪಿಗಾಗಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಆಚರಿಸಲಾಗುತ್ತದೆ.
ಬಾಬು ರಾಜೇಂದ್ರ ಪ್ರಸಾದ್ ಗೆ ಸಿಎಂ ನಮನ
ಭಾರತದ ಪ್ರಥಮ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಪುಣ್ಯತಿಥಿಯ ದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸ್ಮರಿಸಿಕೊಂಡಿದ್ದಾರೆ
"ಭಾರತದ ಪ್ರಥಮ ರಾಷ್ಟ್ರಪತಿ ಭಾರತರತ್ನ ಡಾ.ಬಾಬು ರಾಜೇಂದ್ರ ಪ್ರಸಾದ್ ಅವರ ಪುಣ್ಯತಿಥಿಯಂದು ಗೌರವಪೂರ್ವಕ ಪ್ರಣಾಮಗಳು" ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ಭಾರತದ ಪ್ರಥಮ ರಾಷ್ಟ್ರಪತಿ ಭಾರತರತ್ನ ಡಾ.ಬಾಬು ರಾಜೇಂದ್ರ ಪ್ರಸಾದ್ ಅವರ ಪುಣ್ಯತಿಥಿಯಂದು ಗೌರವಪೂರ್ವಕ ಪ್ರಣಾಮಗಳು. #RajendraPrasad pic.twitter.com/qT4L1GvrKU
— CM of Karnataka (@CMofKarnataka) February 28, 2021