ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳಿಗೆ ಸ್ಥಳ ಒದಗಿಸಲು ಕ್ರಮ- ಸದಾನಂದಗೌಡ 

ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ಸ್ಥಳಾವಕಾಶ ಕಲ್ಪಿಸಬೇಕೆಂಬ ಕೋರಿಕೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಹೇಳಿದ್ದಾರೆ.

Published: 28th February 2021 12:56 AM  |   Last Updated: 28th February 2021 01:31 AM   |  A+A-


DV_Sadanandagowda1

ಡಿ.ವಿ. ಸದಾನಂದಗೌಡ

Posted By : Nagaraja AB
Source : UNI

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ಸ್ಥಳಾವಕಾಶ ಕಲ್ಪಿಸಬೇಕೆಂಬ ಕೋರಿಕೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಹೇಳಿದ್ದಾರೆ.

ನಗರದ ಆರ್ ಆರ್ ಇನ್ಸ್ಟಿಟ್ಯೂಟ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಔಷಧ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿ ಮುಂದಿನ 3 ವರ್ಷಗಳಲ್ಲಿ ದೇಶವನ್ನು ಸಂಪೂರ್ಣ ಸ್ವಾವಲಂಬಿ ಮಾಡಬೇಕು ಎಂಬ ಗುರಿಯೊಂದಿಗೆ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಸಚಿವ ಸದಾನಂದ ಗೌಡ ಹೇಳಿದರು. 

ಭಾರತ ಜನರಿಕ್ ಮೆಡಿಸಿನ್ ಉತ್ಪಾದನೆಯಲ್ಲಿ ಜಾಗತಿಕವಾಗಿ ಮೂರನೇ ಸ್ಥಾನ ಹೊಂದಿದೆ. ಕೋವಿಡ್ ಸಂದರ್ಭದಲ್ಲಿ ಕೂಡಾ ಜಗತ್ತಿನ 120 ದೇಶಗಳಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮಾಲ್ ಮುಂತಾದ ಮಾತ್ರೆಗಳನ್ನು ಪೂರೈಸಿದೆವು. ಆದರೆ ಬಹುತೇಕ ಔಷಧ ಉತ್ಪಾದನೆಗೆ ಬೇಕಾಗುವ ಮೂಲ ರಾಸಾಯನಿಕಗಳಿಗಾಗಿ ನಾವು ಚೀನಾ ಮತ್ತಿತರ ದೇಶಗಳ ಮೇಲೆ ಅವಲಂಬಿತವಾಗಿದ್ದೇವೆ. ಇದರಲ್ಲಿ ಸ್ವಾವಲಂಬನೆ ಸಾಧಿಸಲು ದೇಶದ ಬೇರೆ ಬೇರೆ ಭಾಗಗಳಲ್ಲಿ ಮೂರು ಬಲ್ಕ್ ಡ್ರಗ್ ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

ಈಚೆಗೆ ಮಂಡಿಸಿದ ಬಜೆಟ್ ನಲ್ಲಿ ವಿವಿಧ ವಲಯಗಳ ಉತ್ತೇಜನಕ್ಕಾಗಿ 1.9 ಲಕ್ಷ ಕೋಟಿ ರೂಪಾಯಿ ಒದಗಿಸಲಾಗಿದೆ. ಇದರಲ್ಲಿ ತಾವು ನಿರ್ವಹಿಸುವ ಔಷಧ ಇಲಾಖೆಗೆ 50 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಜನೌಷಧಿ ಮೆಡಿಸಿನ್ ಬಾಸ್ಕೆಟ್ ನಲ್ಲಿ 1439 ನಮೂನೆಯ ಔಷಧಗಳು ಹಾಗೂ 235 ಬಗೆಯ ವೈದ್ಯಕೀಯ ಉಪಕರಣಗಳು ಲಭ್ಯವಿವೆ. ಇದುವರೆಗೆ ದೇಶದ 734 ಜಿಲ್ಲೆಗಳಲ್ಲಿ 7500 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಹಾಗೆಯೇ ದೇಶದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಬಡವರ ಅನುಕೂಲಕ್ಕಾಗಿ ಜನೌಷಧಿ ಕೆಂದ್ರಗಳು ಇರಬೇಕು ಎಂಬುದು ಕೇಂದ್ರ ಸರ್ಕಾರದ ಇಚ್ಛೆಯಾಗಿದೆ ಎಂದರು. 

ಇದೇ ಸಂದರ್ಭದಲ್ಲಿ ಆರ್ ಆರ್ ಕಾಲೇಜು ಕಂಪ್ಯೂಟರ್ ವಿಭಾಗದವರು  ಅಭಿವೃದ್ಧಿಪಡಿಸಿರುವ  ಬ್ಲಡ್ ಡೋನರ್ಸ್ ಆ್ಯಪ್ ಬಿಡುಗಡೆ ಮಾಡಲಾಯಿತು. 

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp