ಬೆಂಗಳೂರು: ಸ್ಫೋಟಕ ವಸ್ತುಗಳ ಮಾರಾಟ ಯತ್ನ, ಆರೋಪಿ ಸೆರೆ

ಸ್ಫೋಟಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ(ಐಎಸ್ ಡಿ) ಪೊಲೀಸರು ಬಂಧಿಸಿದ್ದಾರೆ.

Published: 01st January 2021 05:29 PM  |   Last Updated: 01st January 2021 05:42 PM   |  A+A-


IMAGE1

ಸಾಂದರ್ಭಿಕ ಚಿತ್ರ

Posted By : Nagaraja AB
Source : UNI

ಬೆಂಗಳೂರು: ಸ್ಫೋಟಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್ ಡಿ) ಪೊಲೀಸರು ಬಂಧಿಸಿದ್ದಾರೆ.

ಚಿಂತಾಮಣಿಯ ಸಂತೆಕಲ್ಲಹಳ್ಳಿ ನಿವಾಸಿ ಶಿವಕುಮಾರ್ (35) ಬಂಧಿತ ಆರೋಪಿ. ಬಂಧಿತನಿಂದ 3 ಲಕ್ಷ ರೂ. ಮೌಲ್ಯದ ಜಿಲೆಟಿನ್‌ ಕಡ್ಡಿಗಳು, ಡಿಟೊನೇಟರ್ ಗಳು ಹಾಗೂ ಅಮೋನಿಯಂ ನೈಟ್ರೇಟ್ ಸೇರಿದಂತೆ ಇನ್ನಿತರ ರಾಸಾಯನಿಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಎಸ್‌ಡಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯು ಕೆ.ಆರ್.ಪುರದ ಭಟ್ಟರಹಳ್ಳಿ ಸಿಗ್ನಲ್ ಬಳಿ ಅನುಮಾನಾಸ್ಪದ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಮಾಹಿತಿ  ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿಯು ಹೆಚ್ಚಿನ‌ ಹಣದ ಆಮಿಷಕ್ಕೆ ಒಳಗಾಗಿ ಸ್ಫೋಟಕ ವಸ್ತುಗಳನ್ನು ಮಾರಾಟದಲ್ಲಿ ತೊಡಗಿರುವುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp