ಕೊರೋನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ: ಸಚಿವ ಸುಧಾಕರ್

ಬರೋಬ್ಬರಿ 9 ತಿಂಗಳ ಬಳಿಕ ಶುಕ್ರವಾರದಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಅವರು ಕಿವಿಮಾತು ಹೇಳಿದ್ದಾರೆ.

Published: 01st January 2021 10:03 AM  |   Last Updated: 01st January 2021 12:45 PM   |  A+A-


sudhakar

ಸಚಿವ ಸುಧಾಕರ್

Posted By : Manjula VN
Source : Online Desk

ಬೆಂಗಳೂರು: ಬರೋಬ್ಬರಿ 9 ತಿಂಗಳ ಬಳಿಕ ಶುಕ್ರವಾರದಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಅವರು ಕಿವಿಮಾತು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ನನ್ನ ಕಿವಿಮಾತು ಎಂದು ಹೇಳಿದ್ದಾರೆ. 

ಸರಣಿ ಟ್ವೀಟ್ ಮಾಡಿರುವ ಅವರು, SSLC ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 'ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ' ಎಂಬುದೇ ಸರ್ಕಾರದ ಧ್ಯೇಯ. 

ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ತಿಳಿಸಿದ್ದಾರೆ. 

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp