ರಾಜ್ಯದಲ್ಲಿ ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 343 ಸೇರಿ 755 ಮಂದಿಗೆ ಪಾಸಿಟಿವ್, 3 ಸಾವು!

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶನಿವಾರ 755 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,21,128ಕ್ಕೆ ಏರಿಕೆಯಾಗಿದೆ.

Published: 02nd January 2021 07:14 PM  |   Last Updated: 02nd January 2021 07:54 PM   |  A+A-


coronavirus

ಕೊರೊನಾ ಸೋಂಕು

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶನಿವಾರ 755 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,21,128ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 3 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,099ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 343 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,89,193ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿನಿಂದ ಒಬ್ಬರು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 976 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,98,176ಕ್ಕೆ ಏರಿಕೆಯಾಗಿದೆ. ಇನ್ನು 10,834 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 186 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp