ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪನೆ: ಭದ್ರತೆ ಹೆಚ್ಚಿಸಿದ ಅಧಿಕಾರಿಗಳು

ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪಿಸಿ ಕನ್ನಡ ಪರ ಹೋರಾಟಗಾರರು ಕನ್ನಡ ಬಾವುಟವನ್ನು ಹಾರಿಸಿದ ಬಳಿಕ ಇದೀಗ ಧ್ವಜಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ನೋಡಿಕೊಳ್ಳುವ ಸಲುವಾಗಿ ಪಾಲಿಕೆ ಅಧಿಕಾರಿಗಳು ಭದ್ರತೆಯನ್ನು ಹೆಚ್ಚಿಸಿದ್ದಾರೆ. 

Published: 02nd January 2021 01:04 PM  |   Last Updated: 02nd January 2021 01:50 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪಿಸಿ ಕನ್ನಡ ಪರ ಹೋರಾಟಗಾರರು ಕನ್ನಡ ಬಾವುಟವನ್ನು ಹಾರಿಸಿದ ಬಳಿಕ ಇದೀಗ ಧ್ವಜಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ನೋಡಿಕೊಳ್ಳುವ ಸಲುವಾಗಿ ಪಾಲಿಕೆ ಅಧಿಕಾರಿಗಳು ಭದ್ರತೆಯನ್ನು ಹೆಚ್ಚಿಸಿದ್ದಾರೆ. 

ಕಳೆದ ವಾರ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ಅವರ ನೇತೃತ್ವದಲ್ಲಿ ಕನ್ನಡ ಕಾರ್ಯಕರ್ತರು ಕನ್ನಡ ಬಾವುಟ ಹಾರಿಸಿದ್ದರು. ಇದಕ್ಕೆ ಎಂಇಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ತನ್ನ ಪುಂಡಾಟವನ್ನು ಎಂದಿನಂತೆ ಮುಂದುವರೆಸಿದೆ. 

ಪಾಲಿಕೆ ಎದುರು ಕನ್ನಡ ಬಾವುಟ ಹಾರಿಸಿರುವುದಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕ್ಯಾತೆ ಎತ್ತಿದ್ದು, ಕನ್ನಡಿಗರ ಸಂಭ್ರಮ ಸಹಿಸಿಕೊಳ್ಳದ ಭಾಷಾಂಧ ಎಂಇಎಸ್ ನಾಯಕರು ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರಿಗೆ ದೂರು ನೀಡಿದ್ದಾರೆ. 

ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಂಇಎಸ್, ಕಾನೂನು ಬಾಹಿರವಾಗಿ ಕನ್ನಡಪರ ಸಂಘಟನೆಗಳು ಪ್ರಾದೇಶಿಕ ಆಯುಕ್ತರ ಕಚೇರಿ ಎದರು, ರೈಲ್ವೆ ನಿಲ್ದಾಣ ಎದರು ಪಾಲಿಕೆ ಎದುರು ಹಳದಿ, ಕೆಂಪು ಬಣ್ಣದ ಬಾವುಟ ಹಾರಿಸಿವೆ. ಕನ್ನಡ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಅಲ್ಲದೆ, ಈ ವಿಚಾರವಾಗಿ ಪೊಲೀಸ್ ಅಧಿಕಾರಿಗಳ ಜೊತೆಗೆ ವಾಗ್ವಾದ ಕೂಡ ನಡೆದಿದ್ದು, ಎಂಇಎಸ್ ತನ್ನ ಪುಂಡಾಟಿಕೆ ಪ್ರದರ್ಶಿಸಿದ್ದಾರೆ. 

ಈ ಹಿಂದೆ ಹಲವು ವರ್ಷಗಳಿಂದಲೂ ಪಾಲಿಕೆ ಎದುರು ಮರಾಠಿಗರು ತಮ್ಮ ಧ್ವಜವನ್ನು ಹಾರಿಸಿದ್ದು, ಧ್ವಜವನ್ನು ತೆರವುಗೊಳಿಸಲು ಕನ್ನಡಿಗರು ಸಾಕಷ್ಟು ಹರಸಾಹಸ ಪಟ್ಟರೂ ಅದು ಸಾಧ್ಯವಾಗಿರಲಿಲ್ಲ. ಹೀಗಾಗಿ ಸರ್ಕಾರ ಪಾಲಿಕೆ ಕಚೇರಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಿತ್ತು. ಪಾಲಿಕೆ ನೂತನ ಕಟ್ಟಡಕ್ಕೆ ಸ್ಥಳಾಂತರವಾದ ಬಳಿಕ ಯಾರೊಬ್ಬರೂ ಧ್ವಜವನ್ನು ಹಾರಿಸಿರಲಿಲ್ಲ. ಈ ಸಂದರ್ಭವನ್ನೇ ಬಳಕೆ ಮಾಡಿಕೊಂಡ ಕನ್ನಡಿಗರು ಕನ್ನಡಪರ ನಾಯಕ ಶ್ರೀನಿವಾಸ್ ತಾಳೂಕರ ಅವರ ನೇತೃತ್ವದಲ್ಲಿ ಪಾಲಿಕೆ ಕಚೇರಿ ಮುಂದೆ ಧ್ವಜ ಸ್ತಂಭ ಸ್ಥಾಪಿಸಿ ಧ್ವಜವನ್ನು ಹಾರಿಸಿದರು. ಅಲ್ಲದೆ, ಧ್ವಜಕ್ಕೆ ಯಾವುದೇ ಹಾನಿಯಾಗದಂತೆ ಕಾವಲನ್ನು ಕಾಯುತ್ತಿದ್ದಾರೆ. 

ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಕೂಡ ಧ್ವಜಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ನೋಡಿಕೊಳ್ಳುವ ಸಲುವಾಗಿ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸ್ಥಳದಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಿ, ಬ್ಯಾರಿಕೇಡ್ ಗಳನ್ನು ಹಾಕಿದ್ದಾರೆ. 


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp