ಬೈಕ್ ಗೆ ಬೊಲೆರೋ ವಾಹನ ಡಿಕ್ಕಿ: ಇಬ್ಬರು ಸವಾರರು ಸಾವು

ಬೊಲೆರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದಮನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

Published: 02nd January 2021 11:04 AM  |   Last Updated: 02nd January 2021 01:39 PM   |  A+A-


Casual_Images1

ಸಾಂದರ್ಭಿಕ ಚಿತ್ರ

Posted By : Nagaraja AB
Source : UNI

ಹಾವೇರಿ: ಬೊಲೆರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದಮನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಹಾವೇರಿ ತಾಲೂಕಿನ ಗಣಜೂರು ಗ್ರಾಮದ ನಿವಾಸಿಗಳಾದ ಮಂಜು ಸೋಮನಕಟ್ಟಿ(37), ಬಸವರಾಜ ವಾಲ್ಮೀಕಿ(40) ಮೃತ ದುರ್ದೈವಿಗಳು.

ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಪ್ರಯಾಣಿಸುತ್ತಿದ್ದ ಸರ್ಕಾರಿ ವಾಹನ ಹಾವೇರಿಯಿಂದ ರಾಣೆಬೆನ್ನೂರಿನತ್ತ ಹೊರಟಿದ್ದು, ಸವಾರರು ಹೊನ್ನತ್ತಿ ಮತ್ತು ಕದರಮಂಡಲಗಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp