ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಬಗ್ಗೆ ಸಂತಸ ವ್ಯಕ್ತಪಡಿಸಿದ ಬೆಳಗಾವಿಯ ವೈದ್ಯ ಡಾ.ಅಮಿತ್ ಭಾಟೆ!

ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಸಕಾರಾತ್ಮಕ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಜೀವನ್ ರಕ್ಷಾ ಆಸ್ಪತ್ರೆಯ ವೈದ್ಯ ಡಾ. ಅಮಿತ್ ಭಾಟೆ, ಈ ಲಸಿಕೆ ಬಳಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದರಿಂದ ತೀವ್ರ ಸಂತೋಷವಾಗುತ್ತಿದೆ ಎಂದಿದ್ದಾರೆ.

Published: 04th January 2021 12:47 PM  |   Last Updated: 04th January 2021 12:53 PM   |  A+A-


Covaxin1

ಕೋವಾಕ್ಸಿನ್

Posted By : Nagaraja AB
Source : The New Indian Express

ಬೆಳಗಾವಿ: ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಸಕಾರಾತ್ಮಕ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಜೀವನ್ ರಕ್ಷಾ ಆಸ್ಪತ್ರೆಯ ವೈದ್ಯ ಡಾ. ಅಮಿತ್ ಭಾಟೆ, ಈ ಲಸಿಕೆ ಬಳಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದರಿಂದ ತೀವ್ರ ಸಂತೋಷವಾಗುತ್ತಿದೆ ಎಂದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಸಹಭಾಗಿತ್ವದಲ್ಲಿ ಭಾರತ್ ಬಯೋಟೆಕ್ ಕೋವಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.ಪುಣೆಯಲ್ಲಿ ಅಭಿವೃದ್ಧಿಪಡಿಸಿರುವ ಕೋವಿಶಿಲ್ಡ್ ಬಳಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮೋದನೆ ನೀಡಿದೆ.ಈ ಸುದ್ದಿ ಅತೀವ ಸಂತೋಷವನ್ನುಂಟು ಮಾಡಿದ್ದು, ಹಲವು ತಿಂಗಳುಗಳ ಕಾಲ ಮಾಡಿದ ಪ್ರಯತ್ನಕ್ಕೆ ಫಲ ಸಿಕ್ಕಂತಾಗಿದೆ ಎಂದರು.

ಕೋವಾಕ್ಸಿನ್ ಲಸಿಕೆಯನ್ನು ದೇಶದಲ್ಲಿ 26 ಸಾವಿರ ಜನರಿಗೆ ನೀಡಲಾಗಿದೆ. ಇಲ್ಲಿಯವರೆಗೂ ಯಾವುದೇ ಅಡ್ಡ ಪರಿಣಾಮ ಕಂಡುಬಂದಿಲ್ಲ. ಜೀವನ್ ರಕ್ಷಾ ಆಸ್ಪತ್ರೆಯಲ್ಲಿ ಮೂರು ಹಂತದಲ್ಲಿ ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಎರಡು ಹಂತದ ಪ್ರಯೋಗದಲ್ಲಿ ಒಟ್ಟಾರೇ 54 ಸ್ವಯಂ ಸೇವಕರು ಪಾಲ್ಗೊಂಡಿದ್ದರು. ಮೂರನೇ ಹಂತದ ಪ್ರಯೋಗದಲ್ಲಿ 2 ಸಾವಿರ ಸ್ವಯಂ ಸೇವಕರು ಭಾಗವಹಿಸಿದ್ದರು. ಸ್ವಯಂ ಸೇವಕರಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸಿದ್ದು, ಪ್ರಯೋಗದ ವೇಳೆಯಲ್ಲಿ ಸಕಾರಾತ್ಮಕ ಫಲಿತಾಂಶ ಪಡೆಯಲಾಗಿದೆಯ ಈವರೆಗೂ ಯಾವುದೇ ಅಡ್ಡ ಪರಿಣಾಮ ಬಂದಿಲ್ಲ.  2 ಸಾವಿರ ಜನರಿಗೆ ಲಸಿಕೆ ಸಿದ್ದ ಪಡಿಸಿಕೊಳ್ಳಲು ತುರ್ತು ಅನುಮತಿ ಪಡೆಯಲಾಗಿದೆ ಎಂದು ಡಾ. ಭಾಟೆ ಮಾಹಿತಿ ನೀಡಿದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp