ಮೇನಲ್ಲಿ ದ್ವಿತೀಯ ಪಿಯು, ಜೂನ್ ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸುರೇಶ್ ಕುಮಾರ್

ಪಿಯು ಮತ್ತು ಎಸ್ ಎಸ್ಎಲ್ ಸಿ ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ.

Published: 06th January 2021 08:06 PM  |   Last Updated: 06th January 2021 08:08 PM   |  A+A-


suresh kumar

ಸುರೇಶ್ ಕುಮಾರ್

Posted By : Vishwanath S
Source : UNI

ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್ ಎಸ್ಎಲ್ ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Stay up to date on all the latest ರಾಜ್ಯ news
Poll
Coronil tablets

ಕೋವಿಡ್-19 ವಿರುದ್ಧಪತಂಜಲಿಯ ಕೊರೋನಿಲ್ ಮಾತ್ರೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನೀವು ಭಾವಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp