
ಚಿರತೆ
ಚಾಮರಾಜನಗರ: ಸರ್ಕಾರಿ ಮೆಡಿಕಲ್ ಕಾಲೇಜು ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯಾಗಿದೆ.
ಕಾಲೇಜ್ ಕ್ಯಾಂಪಸ್ ಒಳಗಿನ ವಸತಿ ಗೃಹ ಕಾರಿಡಾರ್ ನಲ್ಲಿ ರಾತ್ರಿ ಒಂಬತ್ತೂವರೆ ಸಮಯದಲ್ಲಿ ಚಿರತೆ ಓಡಾಡಿರುವ ದೃಶ್ಯ ಕಂಡುಬಂದಿದೆ. ಕಾಂಪೌಂಡ್ ನಿಂದ ಒಳಗೆ ಜಿಗಿದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇನ್ನು ಬೆಳಿಗ್ಗೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೆಡಿಕಲ್ ಕಾಲೇಜು ಸಿಬ್ಬಂದಿ ಶಾಕ್ ಆಗಿದೆ. ಇನ್ನು ಈ ಸಂಬಂಧ ಅರಣ್ಯ ಇಲಾಖೆಗೆ ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಸುದ್ದಿ ಮುಟ್ಟಿಸಿದ್ದಾರೆ.
ಚಾಮರಾಜನಗರದ ಎಡಬೆಟ್ಟದ ತಪ್ಪಲಿನಲ್ಲಿ ಮೆಡಿಕಲ್ ಕಾಲೇಜು ಇದೆ. ಎಡಬೆಟ್ಟ ಚಿರತೆಗಳ ಆವಾಸ ಸ್ಥಾನವಾಗಿದೆ.
ವರದಿ-ವಿಡಿಯೋ: ಗುಳಿಪುರ ನಂದೀಶ ಎಂ