ಕನ್ನಡ ನೆಲದಲ್ಲಿ ಕನ್ನಡ ಧ್ವಜ ಹಾರಿಸಲು ಎಂಇಎಸ್ ಅಪ್ಪಣೆ ಬೇಕಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ 

ಕನ್ನಡ ನೆಲದಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಅದರಲ್ಲಿ ಯಾವುದೇ ತಪ್ಪಿಲ್ಲ. ತೆರವುಗೊಳಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಹೇಳುವುದಿದ್ದರೆ ಮಹಾರಾಷ್ಟ್ರ ರಾಜ್ಯಕ್ಕೆ ಹೋಗಿ ಹೇಳಲಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಹೇಳಿದ್ದಾರೆ. 

Published: 09th January 2021 07:59 AM  |   Last Updated: 09th January 2021 11:14 AM   |  A+A-


Deputy Chief Minister Laxman Savadi

ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ

Posted By : Manjula VN
Source : The New Indian Express

ಬೆಳಗಾವಿ: ಕನ್ನಡ ನೆಲದಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಅದರಲ್ಲಿ ಯಾವುದೇ ತಪ್ಪಿಲ್ಲ. ತೆರವುಗೊಳಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಹೇಳುವುದಿದ್ದರೆ ಮಹಾರಾಷ್ಟ್ರ ರಾಜ್ಯಕ್ಕೆ ಹೋಗಿ ಹೇಳಲಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಹೇಳಿದ್ದಾರೆ. 

ಬೆಳಗಾವಿ ಮಹಾನಗರಪಾಲಿಕೆ ಮುಂಭಾಗ ಹಾರಿಸಿರುವ ಕನ್ನಡ ಧ್ವಜವನ್ನು ಜ.21ರ ಒಳಗೆ ತೆರವುಗೊಳಿಸಬೇಕೆಂದು ಎಂಇಎಸ್‌ನವರು ಗಡುವು ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಎಂಇಎಸ್ ಕಾನೂನು ಅಥವಾ ಮಿತಿ ಮೀರಿ ಮಾತನಾಡಿದರೆ ಅಥವಾ ನಡೆದುಕೊಂಡರೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ. 

ಇದೇ ವೇಳೆ ಹಣ ವಂಚನೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರೋಪಿ ಯುವರಾಜ್'ಗೂ ಬಿಜೆಪಿಗೂ ಸಂಬಂಧ ಇದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆರೋಪಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಯಾರೋ ಬಂದು ಮಾಲೆ ಹಾಕಿ ಫೋಟೋ ಕ್ಲಿಕ್ಕಿಸಿಕೊಂಡ ಕೂಡಲೇ ಅವರ ಜೊತೆಗೆ ಸಂಬಂಧ ಇದೆ ಎನ್ನುವುದು ಸರಿಯಲ್ಲ. ವಂಚನೆ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ಅಧಿಕಾರಿಗಳು ಯುವರಾಜನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರಂದು ತಿಳಿಸಿದ್ದಾರೆ. 


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp