ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಬಿಟ್ಟು ಹೋದ ಚಾಲಕ: ಬಸ್‌ ತಡೆದು ಶಿಕ್ಷಣ ಸಚಿವರಿಂದ ಡ್ರೈವರ್ ಗೆ ತರಾಟೆ!

 ಕೊರಟಗೆರೆ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲಿಸದೆ ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಕೆಎಸ್ ಆರ್ ಟಿಸಿ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವರು ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಜರುಗಿದೆ.

Published: 09th January 2021 03:08 PM  |   Last Updated: 09th January 2021 03:08 PM   |  A+A-


Suresh_Kumar1

ಬಸ್ ತಡೆದು ಚಾಲಕನನ್ನು ತರಾಟೆಗೆ ತೆಗೆದುಕೊಂಡಿರುವ ಸಚಿವ ಸುರೇಶ್ ಕುಮಾರ್

Posted By : Nagaraja AB
Source : UNI

ಡಾಬಸ್ ಪೇಟೆ: ಕೊರಟಗೆರೆ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲಿಸದೆ ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಕೆಎಸ್ ಆರ್ ಟಿಸಿ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವರು ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಜರುಗಿದೆ.

ಕೊರಟಗೆರೆ ಮಾರ್ಗವಾಗಿ ಮಧುಗಿರಿಯ ದೂರ ತರಂಗ ಶಿಕ್ಷಣ ಅಭಿಯಾನ ಕಾರ್ಯಕ್ರಮಕ್ಕೆ ಸಚಿವ ಸುರೇಶ್ ಕುಮಾರ್ ತೆರಳುತ್ತಿದ್ದರು. ಈ ವೇಳೆ ಕೆಎಸ್‌ಆರ್‌ಟಿಸಿ ಚಾಲಕ ಶಾಲಾ ಮಕ್ಕಳನ್ನು ಬಸ್ ಗೆ ಹತ್ತಿಸಿಕೊಳ್ಳದೆ ಬಿಟ್ಟು ಹೋಗಿರುವುದು ಅವರ ಗಮನಕ್ಕೆ ಬಂದಿದೆ. ಇದನ್ನು ಗಮನಿಸಿದ ಶಿಕ್ಷಣ ಸಚಿವರು ಬಸ್‌ನ್ನು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಕೆ ಕಾ ಲೋನಿಯ ರಾಜ್ಯ ಹೆದ್ದಾರಿಯಲ್ಲಿಯೇ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವ ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಚಾಲಕ ಮತ್ತು ನಿರ್ವಾಹಕನನ್ನು ಹಿಗ್ಗಾಮುಗ್ಗಾ ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ಸು ನಿಲ್ಲಿಸುವಂತೆ ಚಾಲಕನಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ತೆರಳಲು ಅನುಕೂಲ ಆಗುವಂತೆ ಗ್ರಾಮೀಣ ಸಾರಿಗೆ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ. ಅಲ್ಲದೆ ಈ ಬಗ್ಗೆ ಸಾರಿಗೆ ಸಚಿವರ ಜೊತೆಯೂ ಚೆರ್ಚೆ ನಡೆಸ ಸೂಕ್ತ ನಿರ್ದೇಶನ ಕೊಡಿಸುವುದಾಗಿಯೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Stay up to date on all the latest ರಾಜ್ಯ news
Poll
Yeddyurappa

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಕರ್ನಾಟಕ ಬಜೆಟ್ 2021 ಕುರಿತು ನಿಮ್ಮ ಅಭಿಪ್ರಾಯ...


Result
ಸಮತೋಲಿತ ಬಜೆಟ್
ಗೊತ್ತುಗುರಿ ಇಲ್ಲದ ಬಜೆಟ್
flipboard facebook twitter whatsapp