ಕೋಲಾರ: ಎಲೆಕ್ಟ್ರಾನಿಕ್ ಉಪಕರಣಗಳ ಮಳಿಗೆಯಲ್ಲಿ ಬೆಂಕಿ ಅವಘಡ, ಲಕ್ಷಾಂತರ ರೂ. ವಸ್ತುಗಳು ಭಸ್ಮ
ಎಲೆಕ್ಟ್ರಾನಿಕ್ ಉಪಕರಣಗಳ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅಂಗಡಿ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ನಡೆದಿದೆ.
Published: 09th January 2021 11:50 PM | Last Updated: 09th January 2021 11:50 PM | A+A A-

ಕೋಲಾರ: ಎಲೆಕ್ಟ್ರಾನಿಕ್ ಉಪಕರಣಗಳ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅಂಗಡಿ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ನಡೆದಿದೆ.
ಘಟನೆಯಲ್ಲಿ ಲಕ್ಷಾಂತರ ರೂ. ಬೆಲೆಯ ವಸ್ತುಗಳು ಸುಟ್ಟು ಭಸ್ಮವಾಗಿದೆ.
ದಿನೇಶ್ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದ್ದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದಾರೆ.
ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆಂದು ಶಂಕಿಸಲಾಗಿದೆ.