ಪ್ರಧಾನಿಯಿಂದ ರಾಜ್ಯದಲ್ಲಿ ಎರಡು ಕೋವಿಡ್ ಲಸಿಕೆ ನೀಡಿಕೆ ಕೇಂದ್ರಗಳ ಉದ್ಘಾಟನೆ: ಸುಧಾಕರ್

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎರಡು ಲಸಿಕೆ ನೀಡುವ ಕೇಂದ್ರಗಳನ್ನು ವರ್ಚ್ಯುವಲ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಶನಿವಾರ ತಿಳಿಸಿದ್ದಾರೆ.

Published: 09th January 2021 07:06 PM  |   Last Updated: 09th January 2021 07:06 PM   |  A+A-


DrSudhakar1

ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

Posted By : Lingaraj Badiger
Source : UNI

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎರಡು ಲಸಿಕೆ ನೀಡುವ ಕೇಂದ್ರಗಳನ್ನು ವರ್ಚ್ಯುವಲ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಶನಿವಾರ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಕೋವಿಡ್ ಲಸಿಕೆ ನೀಡಿಕೆಗೆ ಅನುಮತಿ ಪಡೆದುಕೊಂಡಿದೆ. ದೇಶಾದ್ಯಂತ ವರ್ಚುವಲ್ ಮೂಲಕ 5,000 ಲಸಿಕೆ ಕೇಂದ್ರಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 235 ಲಸಿಕೆ ನೀಡಿಕೆ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ಪೈಕಿ ಎರಡು ಕೇಂದ್ರಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಇವುಗಳಲ್ಲಿ ಒಂದು ಬೆಂಗಳೂರಿನ ಆಸ್ಪತ್ರೆ ಮತ್ತು ಹುಬ್ಬಳ್ಳಿಯ ಒಂದು ಆಸ್ಪತ್ರೆ ಸೇರಿವೆ ಎಂದು ಹೇಳಿದ್ದಾರೆ.

ಪ್ರಧಾನಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸೋಮವಾರ ಸಂಜೆ 4 ಗಂಟೆಗೆ ಸಂವಾದ ನಡೆಸಲಿದ್ದಾರೆ. ಈ ವೇಳೆ ಲಸಿಕೆ ನೀಡಿಕೆ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp