ಸಾರಿಗೆ ಸಚಿವ ಲಕ್ಷ್ಮಣ ಸವದಿ ಖಾಸಗಿ ವಾಹನಕ್ಕೆ ಡೀಸೇಲ್: ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ನೊಟೀಸ್

ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಇಲ್ಲಿನ ಎನ್‌ಡಬ್ಲ್ಯುಕೆಆರ್‌ಟಿಸಿ 3ನೇ ಘಟಕದ ಡಿಪೊದಲ್ಲಿ ಡೀಸೆಲ್ ತುಂಬಿಕೊಟ್ಟಿದ್ದಕ್ಕೆ ಸಂಬಂಧಿಸಿದಂತೆ, ಇಂಧನ ಶಾಖೆಯಲ್ಲಿ ಕಿರಿಯ ಸಹಾಯಕ ಕಿಶೋರ ಬಿ.ಎಸ್. ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.

Published: 10th January 2021 09:32 AM  |   Last Updated: 10th January 2021 09:32 AM   |  A+A-


Laxmana savadi

ಲಕ್ಷ್ಮಣ ಸವದಿ

Posted By : Shilpa D
Source : The New Indian Express

ಬೆಳಗಾವಿ: ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಇಲ್ಲಿನ ಎನ್‌ಡಬ್ಲ್ಯುಕೆಆರ್‌ಟಿಸಿ 3ನೇ ಘಟಕದ ಡಿಪೊದಲ್ಲಿ ಡೀಸೆಲ್ ತುಂಬಿಕೊಟ್ಟಿದ್ದಕ್ಕೆ ಸಂಬಂಧಿಸಿದಂತೆ, ಇಂಧನ ಶಾಖೆಯಲ್ಲಿ ಕಿರಿಯ ಸಹಾಯಕ ಕಿಶೋರ ಬಿ.ಎಸ್. ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.

ಸಿಬ್ಬಂದಿಯ ಅಚಾತುರ್ಯದಿಂದ ಈ ಘಟನೆ ನಡೆದಿದೆ. ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಖಾಸಗಿ ವಾಹನಕ್ಕೆ  ಡೀಸೆಲ್ ಹಾಕಿದ್ದಾರೆ. ಸಂಸ್ಥೆಯ ನಿಯಮಾವಳಿ ಪ್ರಕಾರ ಇಲ್ಲಿ ಖಾಸಗಿ ವಾಹನಕ್ಕೆ ಇಂಧನ ಪೂರೈಸುವುದು ಅಪರಾಧವಾಗಿರುತ್ತದೆ. 44 ಲೀಟಿರ್ ಡೀಸೆಲ್ ಹಾಕುವ ಮೂಲಕ  ನಿಯಮಾವಳಿ ಉಲ್ಲಂಘಿಸಲಾಗಿದೆ.

ನಿಷ್ಕಾಳಜಿಯಿಂದಕಾರ್ಯನಿರ್ವಹಿಸಿ ಸಂಸ್ಥೆಯ ಘನತೆಗೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ನಿಮ್ಮನ್ನು ಹೊಣೆಗಾರರನ್ನಾಗಿ ಮಾಡಿ  ಶಿಸ್ತು ಕ್ರಮ ಜರುಗಿಸಬಾರದೇಕೆ? 7 ದಿನಗಳ ಒಳಗೆ ಲಿಖಿತ ಉತ್ತರ ನೀಡುವಂತೆ ಸೂಚಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವ್ ಮುಂಜಿ ತಿಳಿಸಿದ್ದಾರೆ.

ಡಿಪೊದಲ್ಲಿ ಹಾಕಿಸಿದ ಡೀಸೆಲ್‌ಗೆ ಆದ ಮೊತ್ತವನ್ನು ಸಚಿವರು ತಮ್ಮ ಸಿಬ್ಬಂದಿಯ ಮೂಲಕ ಡೀಸೆಲ್ ತುಂಬಿಕೊಟ್ಟ ವ್ಯಕ್ತಿಗೆ ಕೊಟ್ಟಿದ್ದಾರೆ. ಅದನ್ನು ಅವರು ಡಿಪೊಗೆ ಪಾವತಿಸಿದ್ದಾರೆ. ಅವರು ನೋಟಿಸ್‌ಗೆ ವಿವರಣೆ ಕೊಟ್ಟ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು.

ಶುಕ್ರವಾರ ಘಟಕದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಸಚಿವರು ಬಂದಿದ್ದ ವೇಳೆ, ಅವರ ಖಾಸಗಿ ಕಾರಿನ (ಕೆಎ 03 ಎನ್.ಎಫ್ 8989) ಚಾಲಕ ಅಲ್ಲಿನ ಡಿಪೊದಿಂದ ಇಂಧನ ಹಾಕಿಸಿಕೊಂಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ವಿರೋಧ ವ್ಯಕ್ತವಾಗುತ್ತಿದ್ದಂತೆಯೇ, ಸಂಸ್ಥೆಯವರು ಸಿಬ್ಬಂದಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp