ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ ಮುಖ್ಯಮಂತ್ರಿ; ಸಚಿವಾಕಾಂಕ್ಷಿಗಳಲ್ಲಿ ಗರಿಗೆದರಿದ ಆಸೆ

ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ದೆಹಲಿಗೆ ತೆರಳಿದ್ದಾರೆ. 

Published: 10th January 2021 09:40 AM  |   Last Updated: 10th January 2021 10:48 AM   |  A+A-


Yeddyurappa

ಸಿಎಂ ಯಡಿಯೂರಪ್ಪ

Posted By : Manjula VN

ಬೆಂಗಳೂರು: ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ದೆಹಲಿಗೆ ತೆರಳಿದ್ದಾರೆ.

ಬೆಳಗ್ಗೆ 8.20ಕ್ಕೆ ಬೆಂಗಳೂರಿನಿಂದ‌ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ತೆರಳಿದರು.

ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ, ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳೊಂದಿಗೆ ವರಿಷ್ಠರೊಂದಿಗೆ ಚರ್ಚಿಸಲು ದೆಹಲಿಗೆ ಹೋಗುತ್ತಿರುವುದಾಗಿ ತಿಳಿಸಿದರು.

ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಅಭ್ಯರ್ಥಿಗಳ ಕುರಿತು ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿಲಿದ್ದು, ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಕುರಿತಂತೆಯೂ ಮಾಹಿತಿನೀಡಲಿದ್ದೇನೆಂದು ಹೇಳಿದ್ದಾರೆ. 

ಇದೇ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆಯೂ ಚರ್ಚೆ ನಡೆಸಿ, ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶೀಘ್ರದಲ್ಲಿಯೇ ಘೋಷಣೆಯಾಗುವ ನಿರೀಕ್ಷೆಗಳಿರುವುದರಿಂದ ಅದಕ್ಕೂ ಮೊದಲೇ ಸಂಪುಟ ವಿಸ್ತರಣೆ ಕೈಗೊಳ್ಳುವ ಉದ್ದೇಶವನ್ನು ಯಡಿಯೂರಪ್ಪ ಅವರು ಹೊಂದಿದ್ದಾರೆ. ಒಂದು ವೇಳೆ ಚುನಾವಣೆ ಘೋಷಣೆಯಾಗಿದ್ದೇ ಆದರೆ, ಮತ್ತೆ ಒಂದೂವರೆಯಿಂದೆ ಎರಡು ತಿಂಗಳ ಕಾಲ ವಿಳಂಬವಾಗಲಿದೆ ಎಂಬ ಆತಂಕವನ್ನೂ ಯಡಿಯೂರಪ್ಪ ಅವರು ಆಪ್ತರ ಬಳಿ ವ್ಯಕ್ತಪಡಿಸಿದ್ದಾರೆಂದು ಹೇಳಲಾಗುತ್ತಿದೆ. 

ಇದರಂತೆ ಇಂದು ಬೆಳಿಗ್ಗೆ 8.20ಕ್ಕೆ ದೆಹಲಿಗೆ ತರಳಿರುವ ಯಡಿಯೂರಪ್ಪ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವನ್ನೂ ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಬಹುತೇಕ ಯಡಿಯೂರಪ್ಪ ಅವರು ಭಾನುವಾರ ರಾತ್ರಿಯೇ ಬೆಂಗಳೂರಿಗೆ ವಾಪಸಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp