ಕೊರೋನಾ ಸಂಕಷ್ಟ: ಪ್ರಸಕ್ತ ಸಾಲಿನ ಬಜೆಟ್ ಮೊತ್ತದಲ್ಲಿ ರೂ.40 ಸಾವಿರ ಕೋಟಿ ಕೊರತೆ- ಸಿಎಂ ಯಡಿಯೂರಪ್ಪ

ಕೋವಿಡ್ ಸಂಕಷ್ಟ ಮತ್ತು ನೆರೆಯಿಂದಾಗಿ ಪ್ರಸಕ್ತ ಸಾಲಿನ ಬಜೆಟ್ ಮೊತ್ತದಲ್ಲಿ ಸುಮಾರು ರೂ.40 ಸಾವಿರ ಕೋಟಿ ಕೊರತೆಯಾಗಲಿದ್ದು, ರಾಜ್ಯದ ಬಹುತೇಕ ಯೋಜನೆಗಳಿಗೆ ಹಣಕಾಸಿನ ಸಮಸ್ಯೆ ಎದುರಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದ್ದಾರೆ. 

Published: 10th January 2021 09:05 AM  |   Last Updated: 10th January 2021 09:05 AM   |  A+A-


CM-yeddyurappa

ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ

Posted By : Manjula VN
Source : The New Indian Express

ಕೊಪ್ಪಳ: ಕೋವಿಡ್ ಸಂಕಷ್ಟ ಮತ್ತು ನೆರೆಯಿಂದಾಗಿ ಪ್ರಸಕ್ತ ಸಾಲಿನ ಬಜೆಟ್ ಮೊತ್ತದಲ್ಲಿ ಸುಮಾರು ರೂ.40 ಸಾವಿರ ಕೋಟಿ ಕೊರತೆಯಾಗಲಿದ್ದು, ರಾಜ್ಯದ ಬಹುತೇಕ ಯೋಜನೆಗಳಿಗೆ ಹಣಕಾಸಿನ ಸಮಸ್ಯೆ ಎದುರಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದ್ದಾರೆ. 

ಕಲ್ಯಾಣ ಕರ್ನಾಟಕ ಯೋಜನೆಗಳ ಅನುದಾನವನ್ನು ತಡೆಹಿಡಿಯಲಾಗಿದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಕಲ್ಯಾಣ ಕರ್ನಾಟಕವಷ್ಟೇ ಅಲ್ಲ, ರಾಜ್ಯದ ಬಹುತೇಕ ಯೋಜನೆಗಳಿಗೆ ಹಣಕಾಸಿನ ಸಮಸ್ಯೆಯಾಗುತ್ತಿದೆ. ಬಜೆಟ್ ಕೊರತೆಯಾಗುತ್ತಿದೆ. ಹೀಗಾಗಿ ರಾಜ್ಯದ ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. 

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿ, ಪಕ್ಷದ ಹೈಕಮಾಂಡ್ ಅನುಮತಿ ನೀಡುತ್ತಿದ್ದಂತೆಯೇ ರಚನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp