ಮೊದಲ ಹಂತದಲ್ಲಿ ರಾಜ್ಯದಲ್ಲಿ 16 ಲಕ್ಷ ಕೊರೋನಾ ಯೋಧರಿಗೆ ಲಸಿಕೆ- ಮುಖ್ಯಮಂತ್ರಿ ಯಡಿಯೂರಪ್ಪ

ಮೊದಲ ಹಂತದಲ್ಲಿ ರಾಜ್ಯದಲ್ಲಿ 16 ಲಕ್ಷ ಕೊರೋನಾ ಯೋಧರಿಗೆ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Published: 11th January 2021 08:02 PM  |   Last Updated: 11th January 2021 08:03 PM   |  A+A-


CM_BSYediyurappa1

ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

Posted By : Nagaraja AB
Source : Online Desk

ಬೆಂಗಳೂರು: ಮೊದಲ ಹಂತದಲ್ಲಿ ರಾಜ್ಯದಲ್ಲಿ 16 ಲಕ್ಷ ಕೊರೋನಾ ಯೋಧರಿಗೆ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತು ಮಾಹಿತಿ ನೀಡಿದರು.

ರಾಜ್ಯದಲ್ಲಿ 235 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಮೊದಲ ಹಂತದಲ್ಲಿ ಜನವರಿ 16 ರಿಂದ 16 ಲಕ್ಷ ಕೊರೋನಾ ಯೋಧರಿಕೆ ಲಸಿಕೆ ನೀಡಲಾಗುವುದು ಎಂದರು.

 ಲಸಿಕೆ ಶೇಖರಣೆಗೆ ಕೋಲ್ಡ್ ಸ್ಟೋರೇಜ್, ಹಂಚಿಕೆ, ವಿತರಣೆ, ನೀಡುವಿಕೆ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲಾ ಹಂತದಲ್ಲೂ ನಿಗಾ ವಹಿಸಲಾಗಿದೆ. ಹಂತ ಹಂತವಾಗಿ ಲಸಿಕೆ ವಿತರಿಸಲಾಗುವುದು, ಜನರು ಅಗತ್ಯ ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿದರು.

 


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp