ಡಿ.ಜೆ.ಹಳ್ಳಿ, ಕೆ.ಜಿಹಳ್ಳಿ ಗಲಭೆ ಪ್ರಕರಣ: ಕ್ಲೇಮ್ ಕಮಿಷನ್'ಗೆ ಸೌಲಭ್ಯ ನೀಡದ ಸರ್ಕಾರದ ವಿರುದ್ಧ ಹೈಕೋರ್ಟ್ ಬೇಸರ

ಡಿ.ಜೆ.ಹಳ್ಳಿ, ಕೆ.ಜಿಹಳ್ಳಿ ಗಲಭೆ ವೇಳೆ ಸಂಭವಿಸಿದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಅಂದಾಜು ಮಾಡಿ ತಪ್ಪಿತಸ್ಥರ ಹೊಣೆಗಾರಿಕೆ ನಿರ್ಧರಿಸಲು ನೇಮಕಗೊಂಡಿರುವ ಕ್ಲೇಮ್ ಕಮಿಷನ್'ಗೆ ಆಗತ್ಯ ಸಿಬ್ಬಂದಿ ಹಾಗೂ ಮೂಲ ಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Published: 12th January 2021 07:40 AM  |   Last Updated: 12th January 2021 12:48 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿಹಳ್ಳಿ ಗಲಭೆ ವೇಳೆ ಸಂಭವಿಸಿದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಅಂದಾಜು ಮಾಡಿ ತಪ್ಪಿತಸ್ಥರ ಹೊಣೆಗಾರಿಕೆ ನಿರ್ಧರಿಸಲು ನೇಮಕಗೊಂಡಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎಸ್.ಕೆಂಪಣ್ಣ ನೇತೃತ್ವದ ಕ್ಲೇಮ್ ಕಮಿಷನ್'ಗೆ ಆಗತ್ಯ ಸಿಬ್ಬಂದಿ ಹಾಗೂ ಮೂಲ ಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಇದೇ ವೇಳೆ ಕ್ಲೇಮ್ ಕಮಿಷನ್'ಗೆ ಕೂಡಲೇ ಸೌಲಭ್ಯ ಕಲ್ಪಿಸಲು ಮುಖ್ಯ ಕಾರ್ಯದರ್ಶಿಗಳು ಗಮನ ಹರಿಸಬೇಕೆಂದು ಸೂಚನೆ ನೀಡಿದೆ. 

ಪ್ರಕರಣವನ್ನು ಎನ್ಐಎ ತನಿಖೆ ವಹಿಸಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಕುರಿತು ನ್ಯಾ.ಕೆಂಪಣ್ಣ ಅವರು ಹೈಕೋರ್ಟ್'ನ ರಿಜಿಸ್ಟ್ರಾರ್ ಅವರಗೆ ಜ.6ರಂದು ವರದಿ ರವಾನಿಸಿದ್ದಾರೆ. 

ಈ ವರೆಗೆ ಕಾರ್ಯದರ್ಶಿ ನೇಮಕ ಮಾಡಿಲ್ಲ. 4-5 ತಿಂಗಳು ಕಳೆದರೂ ಕಮಿಷನ್ ಕಾರ್ಯಾರಂಭ ಮಾಡಿಲ್ಲ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತಿದೆ. ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನಡೆಸಿಕೊಳ್ಳುವ ರೀತಿ ಇದಲ್ಲ. ಈ ಬಗ್ಗೆ ಕೂಡಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಮನಹರಿಸಬೇಕು. ಖುದ್ದು ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಹೇಳಿದೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp