ವಿದ್ಯಾರ್ಥಿಗಳ ಬಾಹ್ಯಾಕಾಶ ಶಿಕ್ಷಣಕ್ಕಾಗಿ ಇಸ್ರೋದಿಂದ 100 ಸೈನ್ಸ್ ಲ್ಯಾಬ್'ಗಳ ದತ್ತು

ಸ್ಟೇಮ್ (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ), ಬಾಹ್ಯಾಕಾಶ ಶಿಕ್ಷಣ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಸಂಬಂಧಿತ ಅನುಶೋಧನಾ ಕ್ಷೇತ್ರದಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಉತ್ತೇಜಿಸಲು ದೇಶಾದ್ಯಂತ 100 ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ದತ್ತು ಪಡೆಯುವುದಾಗಿ ಇಸ್ರೋ ತಿಳಿಸಿದೆ.

Published: 12th January 2021 10:14 AM  |   Last Updated: 12th January 2021 10:14 AM   |  A+A-


File photo

ಸಂಗ್ರಹ ಚಿತ್ರ

The New Indian Express

ಬೆಂಗಳೂರು: ಸ್ಟೇಮ್ (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ), ಬಾಹ್ಯಾಕಾಶ ಶಿಕ್ಷಣ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಸಂಬಂಧಿತ ಅನುಶೋಧನಾ ಕ್ಷೇತ್ರದಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಉತ್ತೇಜಿಸಲು ದೇಶಾದ್ಯಂತ 100 ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ದತ್ತು ಪಡೆಯುವುದಾಗಿ ಇಸ್ರೋ ತಿಳಿಸಿದೆ.

ನೀತಿ  ಆಯೋಗದ ಅಟಲ್ ಇನ್ನೋವೇಶನ್ ಮಿಷನ್ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ನಡೆಸಿದ ವರ್ಚುವಲ್ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಗಿದೆ. 

ವರ್ಚುವಲ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನೀತಿ ಆಯೋಗದ ಉಪಾಧ್ಯಕ್ಷ ಡಾ.ರಾಜೀವ್ ಕುಮಾರ್ ಅವರು, “ಭಾರತ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳು ಸಮನ್ವಯದೊಂದಿಗೆ ‘ಆತ್ಮನಿರ್ಭರ ಭಾರತ್’ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವುದು ತುಂಬಾ ಸಂತಸದ ವಿಷಯವಾಗಿದೆ. ನೀತಿ ಆಯೋಗ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡುವಿನ ಸಹಯೋಗವು ಅಂತಹ ಪ್ರಯತ್ನದ ಒಂದು ಪ್ರಮುಖ ಉದಾಹರಣೆಯಾಗಿದೆ” ಎಂದು ಹೇಳಿದ್ದಾರೆ. 

ನಮ್ಮ ಯುವ ಉದಯೋನ್ಮುಖ ಬಾಹ್ಯಾಕಾಶ ಸಂಶೋಧಕರು ಮತ್ತು ಗಗನಯಾತ್ರಿಗಳು ದೇಶದ ಪ್ರಖ್ಯಾತ ಅನುಭವಿಗಳಿಂದ ಕಲಿಯಲು ಮತ್ತು ಅವರ ಶಾಲೆ, ಕುಟುಂಬ ಮತ್ತು ಸ್ಥಳೀಯ ಸಮುದಾಯಗಳಿಗೆ ಸ್ಫೂರ್ತಿಯಾಗಲು ಇದೊಂದು ಉತ್ತಮ ಅವಕಾಶವಾಗಿದೆ” ಎಂದು ತಿಳಿಸಿದರು. 

ಸಾಂಪ್ರದಾಯಿಕ ಕಲಿಕೆಗೆ ಹೋಲಿಸಿದರೆ ಶಾಲಾ ಮಕ್ಕಳಲ್ಲಿ ಅನುಶೋಧನೆ ಮತ್ತು ಅನುಭವಿ ಕಲಿಕೆಯ ಮನೋಭಾವವನ್ನು ಉತ್ತೇಜಿಸಲು ಈ ಕ್ರಮ ನೆರವಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಡಾ.ಕೆ.ಶಿವನ್ ಭರವಸೆ ವ್ಯಕ್ತಪಡಿಸಿದರು. ಈ ಯೋಜನೆ ಆಧಾರಿತ ಕಲಿಕೆಯು ಶಾಲಾ ದಿನಗಳಿಂದಲೇ ಸಂಶೋಧನೆಯ ಬಗೆಗಿನ ಮನೋಭಾವವನ್ನು ಹೆಚ್ಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

100 ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ದತ್ತು ಸ್ವೀಕರಿಸುವ ಇಂದಿನ ನಿರ್ಧಾರದ ಮೂಲಕ, ಇಸ್ರೊ ಭೌಗೋಳಿಕವಾಗಿ ಎಲ್ಲೆಡೆ ಉಪಸ್ಥಿತವಿರುತ್ತದೆ. ‘ಆತ್ಮ ನಿರ್ಭರ ಭಾರತ’ ದ ಭಾಗವಾಗಿ ವಿದ್ಯಾರ್ಥಿಗಳು ತಮ್ಮ ಬಾಹ್ಯಾಕಾಶ ಕನಸುಗಳನ್ನು ಈಡೇರಿಸಿಕೊಳ್ಳಲು ನಿರ್ದೇಶನ ನೀಡಲು ಸಂಸ್ಥೆಯು ಒಂದು ಸಣ್ಣ ಹೆಜ್ಜೆ ಇಟ್ಟಿದೆ. 

ಇಸ್ರೋ ಕೇಂದ್ರಗಳ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳು, ಇಸ್ರೋ ಪ್ರಧಾನ ಕೇಂದ್ರದ ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮ ಕಚೇರಿಯ ನಿಕಟ ಸಮನ್ವಯದೊಂದಿಗೆ, ಮಕ್ಕಳಿಗೆ ಸಕ್ರಿಯವಾಗಿ ಮಾರ್ಗದರ್ಶನ ಮಾಡುವುದರ ಜೊತೆಗೆ ಪ್ರಯೋಗಗಳನ್ನು ಉತ್ತೇಜಿಸಲು, ಆಲೋಚನೆಗಳನ್ನು ಚುರುಕುಗೊಳಿಸಲು ಮತ್ತು ಬಾಹ್ಯಾಕಾಶ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಈ ಎಟಿಎಲ್‌ಗಳಲ್ಲಿನ ಶಿಕ್ಷಕರೊಂದಿಗೆ ಸಂವಹನ ನಡೆಸುತ್ತಾರೆ. ಈ ಅಟಲ್ ಟಿಂಕರಿಂಗ್ ಲ್ಯಾಬ್‌ಗಳ ವಿದ್ಯಾರ್ಥಿಗಳು, ಶ್ರೀಹರಿಕೋಟಾದಿಂದ ನಡೆಯುವ ಉಡಾವಣೆಯೊಂದರಲ್ಲಿ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ ಎಂದು ಡಾ. ಶಿವನ್ ಘೋಷಿಸಿದರು.

ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅವರು ಮಾತನಾಡಿ, “ ಭವಿಷ್ಯದ ಬಾಹ್ಯಾಕಾಶ ವಿಜ್ಞಾನಿಗಳನ್ನು ಪೋಷಿಸಲು, ಇಸ್ರೋ ತನ್ನ ಪ್ರಾದೇಶಿಕ ಸಂಶೋಧನಾ ಕೇಂದ್ರಗಳ ಸಹಯೋಗದೊಂದಿಗೆ 100 ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ದತ್ತುಪಡೆಯುತ್ತಿರುವುದು ಬಹಳ ಸಂತಸ ತಂದಿದೆ. ಸ್ಟೇಮ್ (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ), ಬಾಹ್ಯಾಕಾಶ ಶಿಕ್ಷಣ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಸಂಬಂಧಿತ ಅನುಶೋಧನಾ ಕ್ಷೇತ್ರದಲ್ಲಿ ಇಸ್ರೋ ವಿಜ್ಞಾನಿಗಳು ಹಾಗೂ ಸಂಶೋಧಕರೇ ಯುವ ಆವಿಷ್ಕಾರಕರಿಗೆ ವೈಯಕ್ತಿಕವಾಗಿ ಮಾರ್ಗದರ್ಶನ ನೀಡಲಿದ್ದಾರೆಂದು ಹೇಳಿದರು.  


Stay up to date on all the latest ರಾಜ್ಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp