ರಾಜ್ಯಾದ್ಯಂತ ಮಹಿಳಾ ಕಲ್ಯಾಣ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದು

 ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ತಕ್ಷಣ ಗಮನ ಹರಿಸುವಂತೆ ರಾಜ್ಯ ಸರ್ಕಾರ ಪೊಲೀಸ್, ಕಂದಾಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

Published: 12th January 2021 02:09 PM  |   Last Updated: 12th January 2021 02:09 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಕಲಬುರಗಿ:  ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ತಕ್ಷಣ ಗಮನ ಹರಿಸುವಂತೆ ರಾಜ್ಯ ಸರ್ಕಾರ ಪೊಲೀಸ್, ಕಂದಾಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ರಾಜ್ಯದ 29 ಜಿಲ್ಲೆಗಳಲ್ಲಿ ಮಹಿಳಾ ಕಲ್ಯಾಣ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ  ನೀಡಿದ್ದು, ಅವುಗಳನ್ನು ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.  

ಜಮೀನು ಲಭ್ಯವಿರುವ ಜಿಲ್ಲೆಗಳಲ್ಲಿ ಈಗಾಗಲೇ ಮಹಿಳಾ ಕಲ್ಯಾಣ ಕೇಂದ್ರ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿದೆ,  ಕೇಂದ್ರ ಸರ್ಕಾರವು ಪ್ರಾರಂಭಿಸಿದ "ಪೋಶನಾ ಅಭಿಯಾನ"ಯೋಜನೆ  ಜಾರಿಗೆ ತರಲು ಸರ್ಕಾರ ಮುಂದಾಗಿದೆ ಮತ್ತು ಅಂಗನವಾಡಿಗಳಲ್ಲಿನ ಮಕ್ಕಳ ಬೆಳವಣಿಗೆಯ ಮೇಲ್ವಿಚಾರಣೆ ಮಾಡಲು ಸ್ಮಾರ್ಟ್ ಫೋನ್ ವಿತರಿಸಲಾಗಿದೆ ಎಂದು ಶಶಿಕಲಾ ಮಾಹಿತಿ ನೀಡಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಬಾಲ್ಯವಿವಾಹಗಳು ಹೆಚ್ಚಾದ ಬಗ್ಗೆ ವರದಿಗಳು ಬಂದಿದ್ದು ವಿವಿಧ ಜಿಲ್ಲೆಗಳಲ್ಲಿ ಅನೇಕ ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ ಎಂದು ಅವರು ಹೇಳಿದರು. ಕಲಬುರಗಿ ಜಿಲ್ಲೆಯೊಂದರಲ್ಲೇ ಸುಮಾರು  84 ಬಾಲ್ಯ ವಿವಾಹ  ಪ್ರಯತ್ನಗಳನ್ನು ಅಧಿಕಾರಿಗಳು ವಿಫಲಗೊಳಿಸಿದ್ದಾರೆ ಎಂದು ಅವರು ಹೇಳಿದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp