ಜ.15ರಿಂದ ಎಲ್ಲಾ ಕಾಲೇಜುಗಳು ಪೂರ್ಣ ಆರಂಭ: ಲಕ್ಷಣಗಳಿಲ್ಲದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಅಗತ್ಯವಿಲ್ಲ!

ರಾಜ್ಯದಲ್ಲಿ ಜನವರಿ 15 ರಿಂದ ಪದವಿ, ಸ್ನಾತಕೋತ್ತರ, ಪಾಲಿಟೆಕ್ಸಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳುತ್ತಿದ್ದು, ಕೊರೋನಾ ಲಕ್ಷಣಗಳಿಲ್ಲದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಅಗತ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಮಂಗಳವಾರ ಹೇಳಿದ್ದಾರೆ. 

Published: 13th January 2021 07:56 AM  |   Last Updated: 13th January 2021 12:48 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ರಾಜ್ಯದಲ್ಲಿ ಜನವರಿ 15 ರಿಂದ ಪದವಿ, ಸ್ನಾತಕೋತ್ತರ, ಪಾಲಿಟೆಕ್ಸಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳುತ್ತಿದ್ದು, ಕೊರೋನಾ ಲಕ್ಷಣಗಳಿಲ್ಲದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಅಗತ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಮಂಗಳವಾರ ಹೇಳಿದ್ದಾರೆ. 

ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಕೊರೋನಾ ಲಕ್ಷಣಗಳಿಲ್ಲದ ವಿದ್ಯಾರ್ಥಿಗಳಿಗೆ ಪರೀಕ್ಷೆ ಅಗತ್ಯವಿಲ್ಲ ಎಂದು ತಿಳಿಸಿದೆ. 

ನ.17ರಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜು ಆರಂಭಿಸಿದಾಗ ನೀಡಲಾಗಿದ್ದ ಮಾರ್ಗಸೂಚಿಗಳನ್ನೇ ಇತರೆ ಎಲ್ಲಾ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. 

ಶಿಕ್ಷಣ ಸಂಸ್ಥೆಗಳು, ಬೋಧಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ನಿಯಮಗಳನ್ನು ಪಾಲನೆಗಳನ್ನು ಮಾಡಬೇಕು ಎಂದು ಸೂಚಿಸಲಾಗಿದೆ. 

ಮಾರ್ಗಸೂಚಿಯಲ್ಲಿ ತರಗತಿಗೆ ಬರಲು ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯವಾಗಿದೆ. ಆದರೆ, ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ. ತರಗತಿಗೆ ಬರಲಿಚ್ಛಿಸದವರು ಆನ್'ಲೈನ್ ತರಗತಿ ಮುಂದುವರೆಸಬಹುದಾಗಿದೆ. 

ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನ ಕೊಠಡಿಗಳ ಸಂಖಅಯೆಗೆ ಅನುಗುಣವಾಗಿ ಆಸನದ ವ್ಯವಸ್ಥೆ, ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಎಂದು ತಿಳಿಸಲಾಗಿದೆ. 

Stay up to date on all the latest ರಾಜ್ಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp