
ಸಂಗ್ರಹ ಚಿತ್ರ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಆರಂಭವಾಗಲಿರುವ ಕೋವಿಡ್ ಲಸಿಕಾ ವಿತರಣಾ ಕಾರ್ಯಕ್ರಮದಲ್ಲಿ 370 ಟಿಬೆಟಿಯನ್ನರಿಗೆ ಮೊದಲ ಸುತ್ತಿನಲ್ಲಿ ಕೋವಿಡ್ ಲಸಿಕೆ ನೀಡುವ ಸಾಧ್ಯತೆ ಇದೆ.
ಬಿಬಿಎಂಪಿ ಮೂಲಗಳ ಪ್ರಕಾರ ಮೊದಲನೇ ಕಂತಿನಲ್ಲಿ ಲಸಿಕೆ ನೀಡಲು 1.79 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ ರಾಜ್ಯದ ವಿವಿಧೆಡೆ ಆರೋಗ್ಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ 370 ಟಿಬೆಟಿಯನ್ನರಿಗೆ ಲಸಿಕೆ ನೀಡುವ ಸಾಧ್ಯತೆ ಇದೆ.
ಈ ಕುರಿತಂತೆ ಮಾತನಾಡಿರುವ ಸೆಂಟ್ರಲ್ ಟಿಬೆಟಿಯನ್ ಅಡ್ಮಿನಿಸ್ಟ್ರೇಷನ್ (ಸಿಟಿಎ) ಯ ದಕ್ಷಿಣ ವಲಯದ ಮುಖ್ಯ ಪ್ರತಿನಿಧಿ ಚೋಫೆಲ್ ತುಪ್ಟನ್ ಅವರು, ಲಸಿಕೆ ಪಡೆಯಲಿರುವ ಟೆಬೆಟಿಯನ್ ಆರೋಗ್ಯ ಕಾರ್ಯಕರ್ತರ ಹೆಸರನ್ನು ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ನಾವು 370 ಮುಂಚೂಣಿ ಕೋವಿಡ್ ಆರೋಗ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಿದ್ದೇವೆ, ಇದರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಎಚ್ಸಿ) ತಮ್ಮ ತಾಲ್ಲೂಕುಗಳಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಕೆಲವು ಸಮುದಾಯದ ಮುಖಂಡರು ಸಹ ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಅತೀ ಹೆಚ್ಚು ಟಿಬೆಟಿಯನ್ ಆರೋಗ್ಯ ಕಾರ್ಯಕರ್ತರಿಗೆ ಬಹು ನಿರೀಕ್ಷಿತ ಲಸಿಕೆ ನೀಡಲಾಗುತ್ತಿದೆ. ರಾಜ್ಯದ ಐದು ಪ್ರಮುಖ ಪ್ರದೇಶಗಳಲ್ಲಿ ಟಿಬೆಟಿಯನ್ನರು ವಾಸಿಸುತ್ತಿದ್ದು. ಬೈಲಕುಪ್ಪೆಯಲ್ಲಿ 2, ಹುಣಸೂರಿನಲ್ಲಿ 1, ಮೈಸೂರು ಜಿಲ್ಲೆಯಲ್ಲಿ 2, ಉತ್ತರ ಕನ್ನಡ ಜಿಲ್ಲೆಯ ಮುಂಡ್ಗೋಡ್ನಲ್ಲಿ ಒಂದು ಮತ್ತು ಕೊಳ್ಳೆಗಾಲ ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಒಂದು ಕ್ಯಾಂಪ್ ಗಳಿವೆ ಎಂದು ಹೇಳಿದರು.