ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ
ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ದಾರುಣ ಘಟನೆ ಗೌರಿಬಿದನೂರು ತಾಲೂಕಿನ ಕುಡಮಲಕುಂಟೆ ಕೈಗಾರಿಕಾ ಪ್ರದೇಶ ಬಳಿ ನಡೆದಿದೆ.
Published: 14th January 2021 12:11 PM | Last Updated: 14th January 2021 12:11 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ದಾರುಣ ಘಟನೆ ಗೌರಿಬಿದನೂರು ತಾಲೂಕಿನ ಕುಡಮಲಕುಂಟೆ ಕೈಗಾರಿಕಾ ಪ್ರದೇಶ ಬಳಿ ನಡೆದಿದೆ.
ಉತ್ತರ ಪ್ರದೇಶದ ಆಗ್ರಾ ಮೂಲದ ಆಶಿಶ್ (30) ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ದುರ್ಗದ ಮಧು (24) ಮೃತಪಟ್ಟವರು. ಗಾಯಗೊಂಡಿರುವ ಹಿಂಬದಿ ಸವಾರರಾದ ಗೌರಿಬಿದನೂರಿನ ನಾಗಸಂದ್ರದ ಕೃಷ್ಣಮೂರ್ತಿ (19) ಹಾಗೂ ಆಯುರ್ (21)ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಕುಡಮಲಕುಂಟೆ ಕೈಗಾರಿಕಾ ಪ್ರದೇಶ ಬಳಿ ವೇಗವಾಗಿ ಹೋಗುತ್ತಿದ್ದ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಮೋಹನ್ ಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.