ಪ್ರಸಕ್ತ ಹಣಕಾಸು ವರ್ಷದಲ್ಲಿ ಜನೌಷಧಿ ಕೇಂದ್ರಗಳಿಂದ 484 ಕೋಟಿ ರೂಪಾಯಿ ದಾಖಲೆ ವಹಿವಾಟು : ಸದಾನಂದಗೌಡ

ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ 7064 ಪ್ರಧಾನಮಂತ್ರಿ ಜನೌಷಧಿ ಮಳಿಗೆಗಳಲ್ಲಿ 484 ಕೋಟಿ ರೂಪಾಯಿ ಮೊತ್ತದ ದಾಖಲೆ ಪ್ರಮಾಣದ ವಹಿವಾಟು ನಡೆದಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

Published: 14th January 2021 06:21 PM  |   Last Updated: 14th January 2021 06:21 PM   |  A+A-


Sadanandagowda1

ಡಿ.ವಿ. ಸದಾನಂದಗೌಡ

Posted By : Nagaraja AB
Source : UNI

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ 7064 ಪ್ರಧಾನಮಂತ್ರಿ ಜನೌಷಧಿ ಮಳಿಗೆಗಳಲ್ಲಿ 484 ಕೋಟಿ ರೂಪಾಯಿ ಮೊತ್ತದ ದಾಖಲೆ ಪ್ರಮಾಣದ ವಹಿವಾಟು ನಡೆದಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

 ಈ ಕುರಿತು ಮಾಹಿತಿ ನೀಡಿರುವ ಅವರು, ಭಾರತೀಯ ಜನೌಷಧಿ ಮಳಿಗೆಗಳಿಂದ ದೇಶದ  ಎಲ್ಲಾ ಜಿಲ್ಲೆಗಳಲ್ಲಿ ಗುಣಮಟ್ಟದ ಜೆನರಿಕ್ ಔಷಧಿಗಳನ್ನು ಮಾರಾಟ ಮಾಡುತ್ತಿದ್ದು, ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ 60 ರಷ್ಟು ಹೆಚ್ಚು ವಹಿವಾಟು ನಡೆದಿದೆ ಎಂದಿದ್ದಾರೆ. 

ಜನೌಷಧಿ ಮಳಿಗೆಗಳಲ್ಲಿ ಔಷಧಿ ಖರೀದಿ ಮಾಡಿದ ಪರಿಣಾಮ ದೇಶದ ಜನರಿಗೆ 3000 ಕೋಟಿ ರೂಪಾಯಿ ಉಳಿತಾಯವಾಗಿದ್ದು, ಜನರಿಗೆ ಹೆಚ್ಚಿನ ರೀತಿಯಲ್ಲಿ ಉಪಯೋಗವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರ ದೇಶದಲ್ಲಿ ಎಲ್ಲಾ ರೀತಿಯಲ್ಲೂ ಮಹಿಳಾ ಸಬಲೀಕರಣದ ಗುರಿ ಹೊಂದಿದ್ದು, ಈವರೆಗೆ 10 ಕೋಟಿ ಜನೌಷಧಿ ಸುವಿಧ ಸ್ಯಾನಿಟರಿ ಪ್ಯಾಡ್ ಗಳನ್ನು ಒಂದು ರೂ. ದರದಲ್ಲಿ ಮಾರಾಟ ಮಾಡಲಾಗಿದೆ. ಕಳೆದ ಡಿಸೆಂಬರ್ ನಲ್ಲಿ 3.6 ಕೋಟಿ ಸುವಿಧ ಜನೌಷಧಿ ಸ್ಯಾನಿಟರಿ ಪ್ಯಾಡ್ ಗಳಿಗೆ ಬೇಡಿಕೆ  ಬಂದಿದೆ. ಒಟ್ಟು 30 ಕೋಟಿ ಜನೌಷಧಿ ಸ್ಯಾನಿಟರಿ ಪ್ಯಾಡ್ ಗಳ ಟೆಂಡರ್ ನ್ನು ಅಂತಿಮಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು 788 ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳಿದ್ದು, ಕೈಗೆಟುಕುವ ದರದಲ್ಲಿ ಗುಣಮಟ್ಟದ ಜೆನರಿಕ್ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ. 2021ರ ಮಾರ್ಚ್ ಅಂತ್ಯದ ವೇಳೆಗೆ ಮಳಿಗೆಗಳ ಸಂಖ್ಯೆಯನ್ನು 80ಕ್ಕೆ ಹೆಚ್ಚಿಸಲು ಹಾಗೂ ಈ ಕೇಂದ್ರಗಳ ಮೂಲಕ 125 ಕೋಟಿ ರೂ. ಮೊತ್ತದ ಔಷಧಗಳನ್ನು ಮಾರಾಟ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp