ಧಾರವಾಡದಲ್ಲಿ ಭೀಕರ ಅಪಘಾತ; 11 ಮಂದಿ ಸಾವು: ಪ್ರಧಾನಿ ನರೇಂದ್ರ ಮೋದಿ ಸಂತಾಪ
ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
Published: 15th January 2021 09:24 AM | Last Updated: 15th January 2021 04:18 PM | A+A A-

ನಜ್ಜುಗುಜ್ಜಾಗಿರುವ ಟಿಪ್ಪರ್
ಧಾರವಾಡ: ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ವೇಳೆ ಟಿಪ್ಪರ್ವೊಂದು ಡಿಕ್ಕಿ ಹೊಡೆದಿದೆ ಪರಿಣಾಮ 10 ಮಹಿಳೆಯರು ಸೇರಿ ಒಟ್ಟು 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದಾಗಿ ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.ಅಪಘಾತದ ಭೀಕರತೆಗೆ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಾಯಗೊಂಡ ಆರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ,
ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಧಾರವಾಡದಲ್ಲಿ ನಡೆದ ಅಪಘಾತದಲ್ಲಿ 11ಸಾವನಪ್ಪಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ, ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
Saddened by the loss of lives due to a road accident in Karnataka’s Dharwad district. In this sad hour, my thoughts are with the bereaved families. I pray for a quick recovery of those injured: PM @narendramodi
— PMO India (@PMOIndia) January 15, 2021