ಅಮಿತ್ ಶಾ ಆಗಮನ ಹಿನ್ನೆಲೆ: ನಾಳೆ ವಿಧಾನಸೌಧ, ವಿಕಾಸಸೌಧದಲ್ಲಿ ಅರ್ಧ ದಿನ ರಜೆ ಘೋಷಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ[ಜ 16 ರಂದು] ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪೊಲೀಸ್ ಗೃಹ-2025 ಯೋಜನೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧ...

Published: 15th January 2021 07:22 PM  |   Last Updated: 15th January 2021 07:22 PM   |  A+A-


vidhana soudha

ವಿಧಾನಸೌಧ

Posted By : Lingaraj Badiger
Source : UNI

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ[ಜ 16 ರಂದು] ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪೊಲೀಸ್ ಗೃಹ-2025 ಯೋಜನೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಅರ್ಧ ದಿನ ರಜೆ ಘೋಷಿಸಲಾಗಿದೆ.

ಸದರಿ ಕಾರ್ಯಕ್ರಮದಲ್ಲಿ ಅತೀ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಸುರಕ್ಷತೆಯ ಹಿತದೃಷ್ಟಿ ಹಾಗೂ ಬಂದೋಬಸ್ತು ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿನ ಕಚೇರಿಗಳಿಗೆ ಜನವರಿ 16 ರಂದು ಅಪರಾಹ್ನ ಅರ್ಧ ದಿನ ರಜೆ ಘೋಷಿಸಲಾಗಿದೆ.

ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳು ಮಧ್ಯಾಹ್ನ 1.30 ಗಂಟೆಗೆ ಕಛೇರಿಯಿಂದ ನಿರ್ಗಮಿಸುವಂತೆ ಸಚಿವಾಲಯದ ಪ್ರಕಟಣೆ ತಿಳಿಸಿದೆ.

Stay up to date on all the latest ರಾಜ್ಯ news
Poll
Coronil tablets

ಕೋವಿಡ್-19 ವಿರುದ್ಧಪತಂಜಲಿಯ ಕೊರೋನಿಲ್ ಮಾತ್ರೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನೀವು ಭಾವಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp