ಹರಿಹರ ಪಂಚಮಸಾಲಿ ಪೀಠಕ್ಕೆ ರೂ.10 ಕೋಟಿ ಅನುದಾನ ಘೋಷಿಸಿದ ಸಿಎಂ ಯಡಿಯೂರಪ್ಪ

ಹರಿಹರ ತಾಲೂಕಿನ ಹನಗವಾಡಿ ಗ್ರಾಮದಲ್ಲಿರುವ ವೀರಶೈವ ಪಂಚಮಸಾಲಿ ಲೀಂಗಾಯತ ಗುರು ಪೀಠಕ್ಕೆ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೂ.10 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. 

Published: 15th January 2021 08:13 AM  |   Last Updated: 15th January 2021 12:43 PM   |  A+A-


yeddyurappa

ಯಡಿಯೂರಪ್ಪ

Posted By : Manjula VN
Source : The New Indian Express

ದಾವಣಗೆರೆ: ಹರಿಹರ ತಾಲೂಕಿನ ಹನಗವಾಡಿ ಗ್ರಾಮದಲ್ಲಿರುವ ವೀರಶೈವ ಪಂಚಮಸಾಲಿ ಲೀಂಗಾಯತ ಗುರು ಪೀಠಕ್ಕೆ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೂ.10 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. 

ಹರಿಹರ ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಗುರುವಾರ ಹರ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಾವಲಂಬಿ ಸಮಾವೇಶದಲ್ಲಿ ಸಂಕ್ರಾಂತಿ ಸಂಭ್ರಮ ಉದ್ಘಾಟಿಸಿದ ಅವರು, ವೀರಶೈವ ಪಂಚಮಸಾಲಿ ಲೀಂಗಾಯತ ಗುರು ಪೀಠಕ್ಕೆ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ರೂ.10 ಕೋಟಿ ಅನುದಾನ ಘೋಷಣೆ ಮಾಡಿದರು. 

ಶ್ರೀಮಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ರೂ.10 ಕೋಟಿ ಅನುದಾನ ನೀಡಲಾಗುವುದು. 4-5 ದಿನಗಳಲ್ಲಿ ಮಠದ ಖಾತೆಗೆ ಹಣ ಮಂಜೂರು ಮಾಡಲಾಗುವುದು. ಇದನ್ನು ಸದುಪಯೋಗವನ್ನು ಪಂಚಮಸಾಲಿ ಮಠ ಪಡೆದುಕೊಳ್ಳಬೇಕು ಎಂದು ತಿಳಿಸಿದರು. 

ಸಚಿವ ಮುರುಗೇಶ್ ನಿರಾಣಿ ಪ್ರಯತ್ನದಿಂದ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗ ಪಟ್ಟಿಗೆ ಸೇರಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದ್ದಾರೆ. 

ನಾನು ಬೇರೆಯಲ್ಲ, ಪಂಚಮಸಾಲಿ ಸಮಾಜ ಬೇರೆಯಲ್ಲ. ಎಂದೆಂದಿಗೂ ಈ ಸಮಾಜದ ಜೊತಗೆ ನಾನು ಇದ್ದೇ ಇರುತ್ತೇನೆ. ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲು ಸಿದ್ಧ ಎಂದು ಹೇಳಿದ್ದಾರೆ. 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp