ಬೆಂಗಳೂರು ವಿಮಾನ ನಿಲ್ದಾಣ ಮೆಟ್ರೋ ಮಾರ್ಗಕ್ಕೆ ಶೀಘ್ರವೇ ಗ್ರೀನ್ ಸಿಗ್ನಲ್ 

ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ 56 ಕಿ.ಮೀ ಮಾರ್ಗ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧವಾಗಿದೆ. 14,844 ಕೋಟಿ ರೂ. ವೆಚ್ಚದ ಈ ಯೋಜನಾ ವರದಿಯನ್ನು ಸಾರ್ವಜನಿಕ ಹೂಡಿಕೆ ಮಂಡಳಿಗೆ(ಪಿಐಬಿ) ಕಳುಹಿಸಿದ್ದು.

Published: 15th January 2021 01:23 PM  |   Last Updated: 15th January 2021 01:23 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೆಂಗಳೂರು:   'ನಮ್ಮ ಮೆಟ್ರೊ'ದಲ್ಲಿ ಕೋಣನಕುಂಟೆ ಕ್ರಾಸ್ ನಿಂದ ಸಿಲ್ಕ್ ಬೋರ್ಡ್ ವರೆಗೆ 6 ಕಿ.ಮೀ. ಮೆಟ್ರೊ ರೈಲು ಮಾರ್ಗ ವಿಸ್ತರಿಸುವುದರೊಂದಿಗೆ ದೇಶದ 18 ಜಿಲ್ಲೆಗಳಲ್ಲಿ 700 ಕಿ.ಮೀ. ಮೆಟ್ರೊ ಜಾಲ ರೂಪಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ರಾಜ್ಯ ಸಚಿವ ಹರ್ ದೀಪ್ ಸಿಂಗ್ ಪುರಿ ಹೇಳಿದರು. 

ನಗರದಲ್ಲಿ ಗುರುವಾರ ರೀಚ್ 4ಬಿ ವಿಸ್ತರಿತ ಮಾರ್ಗಕ್ಕೆ ಚಾಲನೆ ನೀಡಿದ ಅವರು, 'ಸಿಲ್ಕ್ ಬೋರ್ಡ್ ನಿಂದ ವಿಮಾನ ನಿಲ್ದಾಣದವರೆಗೆ ಮೆಟ್ರೊ ಮಾರ್ಗ ನಿರ್ಮಾಣಕ್ಕಾಗಿ ಸಾರ್ವಜನಿಕ ಹೂಡಿಕೆ ಮಂಡಳಿಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿದೆ' ಎಂದರು.

'ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ 56 ಕಿ.ಮೀ ಮಾರ್ಗ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧವಾಗಿದೆ. 14,844 ಕೋಟಿ ರೂ. ವೆಚ್ಚದ ಈ ಯೋಜನಾ ವರದಿಯನ್ನು ಸಾರ್ವಜನಿಕ ಹೂಡಿಕೆ ಮಂಡಳಿಗೆ(ಪಿಐಬಿ) ಕಳುಹಿಸಿದ್ದು, ಶೀಘ್ರದಲ್ಲೇ ಒಪ್ಪಿಗೆ ಸಿಗಲಿದೆ,'' ಎಂದು ಹೇಳಿದರು.

'ಚಾಲಕ ರಹಿತ ಮೆಟ್ರೋ ವ್ಯವಸ್ಥೆ ಹಾಗೂ 2ನೇ ಹಂತದ ನಗರಗಳಲ್ಲಿ ಮೆಟ್ರೋ ಲೈಟ್‌, ನಿಯೊ ಸೇವೆಯನ್ನೂ ಅನುಷ್ಠಾನಗೊಳಿಸಲು ಸಿದ್ಧತೆ ನಡೆಸಲಾಗಿದೆ. ಜತೆಗೆ ಕೊಚ್ಚಿಯಲ್ಲಿ ವಾಟರ್‌ ಮೆಟ್ರೋ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ. ಕೋವಿಡ್‌ ಬಿಕ್ಕಟ್ಟಿನಿಂದ ಮೆಟ್ರೋ ನಿಗಮಗಳು ಸಾಕಷ್ಟು ನಷ್ಟ ಅನುಭವಿಸಿವೆ. ಕೋವಿಡ್‌ ಪೂರ್ವಕ್ಕೆ ಹೋಲಿಸಿದರೆ, ಈಗ ಶೇ.25ರಷ್ಟು ಮಂದಿ ಮಾತ್ರ ಪ್ರಯಾಣಿಸುತ್ತಿದ್ದಾರೆ,'' ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಆರಂಭವಾದ ಬಳಿಕ ಸಮೂಹ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಮನ್ವಂತರ ಸೃಷ್ಟಿಯಾಗಿದೆ. ದೇಶದ 18 ನಗರಗಳಲ್ಲಿ 700 ಕಿ.ಮೀ ವರೆಗೆ ಮೆಟ್ರೋ ಜಾಲವಿದೆ. 1000 ಕಿ.ಮೀ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ. 2025ರ ವೇಳೆಗೆ 1700 ಕಿ.ಮೀ ಉದ್ದದ ಮೆಟ್ರೋ ಮಾರ್ಗವು ಸಿದ್ಧವಾಗಲಿದೆ. ಮೆಟ್ರೋ ಸೇವೆಯನ್ನು 25 ನಗರಗಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ,'' ಎಂದರು.

2019 ರ ಜನವರಿಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು.  ಪಿಐಬಿ ಅನುಮೋದನೆ ಪಡೆದ ನಂತರ ಅದನ್ನು ಸಂಪುಟಕ್ಕೆ ಕಳುಹಿಸುವುದಾಗಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಮಾಧ್ಯಮಕ್ಕೆ ತಿಳಿಸಿದರು.

ಮುಂಬರುವ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ವೇಳೆಗೆ ನಗರದ ಮೆಟ್ರೋ ಜಾಲವನ್ನು 75 ಕಿ.ಮೀ ಗೆ ವಿಸ್ತರಿಸುವ ಗುರಿ ಇದೆ. 2025ರ ವೇಳೆಗೆ 172 ಕಿ.ಮೀ ಉದ್ದದ ಮೆಟ್ರೋ ಮಾರ್ಗವು ಸಿದ್ಧವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು.
 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp