ಬಾಕಿ ಯೋಜನೆ ಪೂರ್ಣಗೊಳಿಸಲು 4 ಸಾವಿರ ಕೋಟಿ ರೂ. ಸಾಲ ಮಾಡಿ: ರಾಜ್ಯ ಸರ್ಕಾರಕ್ಕೆ ಗಡ್ಕರಿ ಸಲಹೆ

ರಾಜ್ಯದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ ವಿವಿಧ ಬ್ಯಾಂಕುಗಳಿಂದ 3 ರಿಂದ 4 ಸಾವಿರ ಕೋಟಿ ರೂಪಾಯಿಗಳ ಸಾಲ ಪಡೆಯುವುದು ಸೂಕ್ತ ಎಂದು ಕೇಂದ್ರ ಭೂ ಸಾರಿಗೆ...

Published: 15th January 2021 04:19 PM  |   Last Updated: 15th January 2021 04:19 PM   |  A+A-


gadkari

ನಿತಿನ್ ಗಡ್ಕರಿ

Posted By : Lingaraj Badiger
Source : UNI

ಬೆಂಗಳೂರು: ರಾಜ್ಯದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ ವಿವಿಧ ಬ್ಯಾಂಕುಗಳಿಂದ 3 ರಿಂದ 4 ಸಾವಿರ ಕೋಟಿ ರೂಪಾಯಿಗಳ ಸಾಲ ಪಡೆಯುವುದು ಸೂಕ್ತ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಬಾಕಿ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು. ಮುಂದಿನ 10 ವರ್ಷಗಳಲ್ಲಿ ಸಾಲ ಮರು ಪಾವತಿಗೆ ಸೂಕ್ತ ಕಾರ್ಯ ಯೋಜನೆಯನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ರಾಜ್ಯದಲ್ಲಿ 323 ಕೋಟಿ ರೂಪಾಯಿ ಅಂದಾಜು ವೆಚ್ಚದ 2 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿ, ಹುಬ್ಬಳ್ಳಿ ನಗರದಲ್ಲಿ ರಾಣಿ ಚೆನ್ನಮ್ಮ ವೃತ್ತ ಹಾದು ಹೋಗುವ ಎತ್ತರಿಸಿದ ಕಾರಿಡಾರ್ ಯೋಜನೆ, ಕಲಘಟಗಿ ತಾಲೂಕಿನ ಸಮೀಪದ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ, 4 ಪಥದ ರಸ್ತೆ ಸಣ್ಣ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಚಿವ ನಿತಿನ್ ಗಡ್ಕರಿ ಮಾತನಾಡಿ, ಕರ್ನಾಟಕ ಅತ್ಯಂತ ಪ್ರಗತಿಪರ ರಾಜ್ಯವಾಗಿದ್ದು, ಇಲ್ಲಿನ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಓದಗಿಸಲಾಗುವುದು. ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಹೆದ್ದಾರಿ ಅಭಿವೃದ್ಧಿಗೆ ಒತ್ತು ನೀಡಿದ್ದು, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳನ್ನು ಸಂಪರ್ಕಿಸುವ ಹಲವು ಕಾಮಗಾರಿಗಳು ರಾಜ್ಯಕ್ಕೆ ಪೂರಕವಾಗಿವೆ ಎಂದರು.

ಕರ್ನಾಟಕ ಎಲ್ಲ ರೀತಿಯಿಂದಲೂ ಅಭಿವೃದ್ಧಿ ಹೊಂದುತ್ತಿದ್ದು, ಬೆಂಗಳೂರು ನಗರ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಆದರೆ, ಇಲ್ಲಿನ ಸಂಚಾರಿ ಒತ್ತಡ ನಿಭಾಯಿಸಲು ಮತ್ತೊಂದು ವರ್ತುಲ ರಸ್ತೆ ನಿರ್ಮಾಣ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ಹೇಳಿದರು.

ಮುಂಬೈ-ಗೋವಾ, ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗಿದೆ. ಉತ್ತರ ಕನ್ನಡದ ಬೇಲಿಕೇರಿ ಬಂದರು ಅಭಿವೃದ್ಧಿ ಸರ್ಕಾರದ ಆದ್ಯತೆಯಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದರು.

ಮಂಗಳೂರು ಬಂದರು ಅಭಿವೃದ್ಧಿಗೂ ಕೇಂದ್ರ ಸರ್ಕಾರ ಗಮನ ಹರಿಸಲಿದೆ. ಶಿರಾಡಿ ಘಾಟ್ ನ ರಸ್ತೆ ಅಭಿವೃದ್ಧಿಯಿಂದಾಗಿ ಮಂಗಳೂರು ಬಂದರಿನ ವಹಿವಾಟು ಹೆಚ್ಚಲು ಸಹಕಾರಿಯಾಗಿದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp