ಹಿರಿಯ ಪತ್ರಕರ್ತ ಹನುಮಂತ ಹೂಗಾರ ಇನ್ನಿಲ್ಲ

ಹಿರಿಯ ಪತ್ರಕರ್ತ ಹನುಮಂತ ಭೀಮಪ್ಪ ಹೂಗಾರ (74)ಇಂದು ಮಧ್ಯಾಹ್ನ ನಿಧನರಾದರು.

Published: 15th January 2021 07:34 PM  |   Last Updated: 15th January 2021 08:00 PM   |  A+A-


ಹನುಮಂತ ಹೂಗಾರ

Posted By : Raghavendra Adiga
Source : UNI

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಹನುಮಂತ ಭೀಮಪ್ಪ ಹೂಗಾರ (74)ಇಂದು ಮಧ್ಯಾಹ್ನ ನಿಧನರಾದರು. 

ಮ್ತತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಕಲಬುರಗಿ ಮಠ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿತು.

ಇತ್ತೀಚೆಗೆ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ 2020ನೇ ಸಾಲಿನ 'ಜೀವಮಾನ ಸಾಧನೆ' ಪ್ರಶಸ್ತಿಗೆ ಭಾಜನವಾಗಿದ್ದ  ಹನುಮಂತ ಹೂಗಾರ ಕಳೆದ ನಾಲ್ಕು ದಶಕಗಳಿಂದ  ಹೆಚ್ಚು ಕಾಲ ನೇತಾಜಿ, ವಿಶಾಲ ಕರ್ನಾಟಕ, ಪ್ರವರ್ತಕ, ಕುಟುಂಬ ಹಾಗೂ ವಿಶ್ವವಾಣಿ ಇದೇ ಮೊದಲಾದ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಹನುಮಂತ ಹೂಗಾರ ಮಹಾನಗರಪಾಲಿಕೆ ಸದಸ್ಯರಾಗಿ ಸಹ ಸೇವೆ ಸಲ್ಲಿಸಿದ್ದರು. ಪತ್ರಿಕಾರಂಗಕ್ಕೆ ನೀಡಿದ್ದ ಕೊಡುಗೆಯನ್ನು ಪರಿಗಣಿಸಿ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಂತಾಪ

ಹಿರಿಯ ಪತ್ರಕರ್ತ ಹನುಮಂತ ಹೂಗಾರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಂತಾಪ ಸೂಚಿಸಿದ್ದಾರೆ."ಹೂಗಾರ ವೈಯುಕ್ತಿಕವಾಗಿ ನನಗೆ ಒಳ್ಳೆಯ ಮಿತ್ರರಾಗಿದ್ದರು, ಉತ್ತರ ಕರ್ನಾಟಕದ ಜನರ ದನಿಯಾಗಿ ಪತ್ರಿಕಾರಂಗದಲ್ಲಿ ಅಪಾರ ಸೇವೆ ಸಲ್ಲಿಸಿದರೆಂದು" ಹೊರಟ್ಟಿ ತಮ್ಮ ಸಂದೇಶದಲ್ಲಿ ವಿವರಿಸಿದ್ದಾರೆ.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp