ಜನವರಿ 18 ರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡೇತರ ಸೇವೆ ಆರಂಭ

ನಗರದಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವ ಕಾರಣ ವಿಕ್ಟೋರಿಯಾ ಆಸ್ಪತ್ರೆಯು ಕೋವಿಡೇತರ ಸೇವೆ ಪ್ರಾರಂಭಿಸಲು ಸಜ್ಜಾಗುತ್ತಿದೆ. ಜ.18ರಿಂದ ಎಲ್ಲಾ ರೀತಿಯ ಚಿಕಿತ್ಸೆ ಪುನರಾರಂಭ ಮಾಡಲಾಗುತ್ತದೆ.

Published: 15th January 2021 09:36 AM  |   Last Updated: 15th January 2021 12:46 PM   |  A+A-


File photo

ಸಂಗ್ರಹ ಚಿತ್ರd

Posted By : Manjula VN
Source : The New Indian Express

ಬೆಂಗಳೂರು: ನಗರದಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವ ಕಾರಣ ವಿಕ್ಟೋರಿಯಾ ಆಸ್ಪತ್ರೆಯು ಕೋವಿಡೇತರ ಸೇವೆ ಪ್ರಾರಂಭಿಸಲು ಸಜ್ಜಾಗುತ್ತಿದೆ. ಜ.18ರಿಂದ ಎಲ್ಲಾ ರೀತಿಯ ಚಿಕಿತ್ಸೆ ಪುನರಾರಂಭ ಮಾಡಲಾಗುತ್ತದೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಸರ್ಕಾರವು ವಿಕ್ಟೋರಿಯಾದಲ್ಲಿದ್ದ ರೋಗಿಗಳನ್ನು ಜಯನಗರ ಸಾರ್ವಜನಿಕ ಆಸ್ಪತ್ರೆ, ಕೆ.ಸಿ. ಜನರಲ್, ಸಿ.ವಿ. ರಾಮನ್ ಸೇರಿದಂತೆ ನಗರದ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿತ್ತು.

ಒಂದೇ ಕಡೆ ಕೊರೊನಾ ಸೋಂಕಿತರನ್ನು ದಾಖಲಿಸಿಕೊಂಡಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಸಾಧ್ಯ ಎಂಬ ಕಾರಣಕ್ಕೆ ವಿಕ್ಟೋರಿಯಾದಲ್ಲಿ 550 ಹಾಸಿಗೆಗಳನ್ನು ಕೋವಿಡ್‌ ರೋಗಿಗಳಿಗೆ ಮೀಸಲಿಟ್ಟು, 9 ತಿಂಗಳಿನಿಂದ ಚಿಕಿತ್ಸೆ ಒದಗಿಸಲಾಗುತ್ತಿದೆ. ಈಗ ಕೋವಿಡ್ ಪೀಡಿತರ ಸಂಖ್ಯೆ ಇಳಿಕೆಯಾಗಿರುವುದರಿಂದ ಕೆಲ ದಿನಗಳಿಂದ ಅಲ್ಲಿ ಬಹುತೇಕ ಹಾಸಿಗೆಗಳು ಖಾಲಿಯಿವೆ.

ವಿಕ್ಟೋರಿಯಾದ ಆವರಣದಲ್ಲಿರುವ ಆಸ್ಪತ್ರೆಗಳಲ್ಲಿ ವಾಣಿವಿಲಾಸ ಮತ್ತು ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಮಾತ್ರ ಕೋವಿಡೇತರ ಸೇವೆ ಮುಂದುವರಿಸಲಾಗಿತ್ತು.

ಎಮರ್ಜೆನ್ಸಿ ಟ್ರಾಮಾ ಸೆಂಟರ್, ಮಿಂಟೊ ಕಣ್ಣಿನ ಆಸ್ಪತ್ರೆ ಹಾಗೂ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್‌ವೈ) ಆಸ್ಪತ್ರೆಯಲ್ಲಿ ಕೂಡ ಕೋವಿಡ್ ಪೀಡಿತರಿಗೆ ಚಿಕಿತ್ಸೆಗೆ ಹಾಗೂ ಆರೋಗ್ಯ ಸಿಬ್ಬಂದಿಯನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲು ಕೆಲ ಹಾಸಿಗೆಗಳನ್ನು ಮೀಸಲಿಟ್ಟು, ಕೋವಿಡೇತರ ಸೇವೆಗಳನ್ನು ಸ್ಥಗಿತ ಮಾಡಲಾಗಿತ್ತು. 

ಇದೀಗ ಕೋವಿಡ್ ಪ್ರಕರಣಗಳು ಇಳಿಕೆಯಾಗಿದ್ದರಿಂದ ಮಿಂಟೊ ಕಣ್ಣಿನ ಆಸ್ಪತ್ರೆ ಹಾಗೂ ಪಿಎಂಎಸ್‌ಎಸ್‌ವೈ ಆಸ್ಪತ್ರೆಯಲ್ಲಿ ಎಲ್ಲ ವೈದ್ಯಕೀಯ ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp