ಬೆಂಗಳೂರಿನಲ್ಲಿ ಇಂದು 259 ಮಂದಿಗೆ ಕೋವಿಡ್ ಲಸಿಕೆ ವಿತರಣೆ: ಡಾ. ಶ್ರೀನಿವಾಸ್
ಇಂದು ಪ್ರಾರಂಭಗೊಂಡ ಕೋವಿಡ್ ಲಸಿಕಾ ಕಾರ್ಯಕ್ರಮದಡಿ ಬೆಂಗಳೂರಿನಲ್ಲಿ ಒಟ್ಟು ಐದು ಕೇಂದ್ರಗಳಲ್ಲಿ ಲಸಿಕೆ ವಿತರಣೆಯಾಗಿದ್ದು, ಒಟ್ಟು 259 ಜನ ಕೊರೋನಾ ಸೈನಿಕರಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್ ತಿಳಿಸಿದ್ದಾರೆ.
Published: 16th January 2021 08:00 PM | Last Updated: 16th January 2021 08:00 PM | A+A A-

ಲಸಿಕೆ ನೀಡುತ್ತಿರುವ ದೃಶ್ಯ
ಬೆಂಗಳೂರು: ಇಂದು ಪ್ರಾರಂಭಗೊಂಡ ಕೋವಿಡ್ ಲಸಿಕಾ ಕಾರ್ಯಕ್ರಮದಡಿ ಬೆಂಗಳೂರಿನಲ್ಲಿ ಒಟ್ಟು ಐದು ಕೇಂದ್ರಗಳಲ್ಲಿ ಲಸಿಕೆ ವಿತರಣೆಯಾಗಿದ್ದು, ಒಟ್ಟು 259 ಜನ ಕೊರೋನಾ ಸೈನಿಕರಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್ ತಿಳಿಸಿದ್ದಾರೆ.
ಒಟ್ಟು 403 ಮಂದಿಗೆ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ದಿನದ ಅಂತ್ಯಕ್ಕೆ 259 ಮಂದಿಗೆ ಇಲಾಖೆಯಿಂದ ಲಸಿಕೆಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ ಅವರು ಶೇ. 65 ರಷ್ಟು ಯಶಸ್ಸನ್ನು ಮೊದಲ ದಿನ ಸಾಧಿಸಲಾಗಿದೆ ಎಂದು ತಿಳಿಸಿದರು.
ಆನೇಕಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ 52 ಜನರಿಗೆ, ಕೆ ಆರ್ ಪುರಂ ಸಾರ್ವಜನಿಕ ಆಸ್ಪತ್ರೆಯಲ್ಲಿ 81 ಜನರಿಗೆ, ಈಸ್ಟ್ ಪಾಯಿಂಟ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 40 ಜನರಿಗೆ, ಕಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಸೇರಿದಂತೆ ನಿಮ್ಹಾನ್ಸ್ ನಲ್ಲಿ 56 ಮಂದಿಗೆ ಇಂದು ಲಸಿಕೆ ವಿತರಣೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಆಯ್ದ ಆರೋಗ್ಯ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾರ್ಗ ಸೂಚಿಗಳ ಅನ್ವಯ ಪ್ರತಿ ಲಸಿಕಾ ಕೇಂದ್ರಗಳು ಮೂರು ಕೊಠಡಿಗಳನ್ನು ಹೊಂದಿದ್ದು. ಪ್ರತ್ಯೇಕ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಹೊಂದಿರುತ್ತವೆ. ಫಲಾನುಭವಿಗಳು ಕುಳಿತುಕೊಳ್ಳಲು ಸಾಕಷ್ಟು ಸ್ಥಳಾವಕಾಶವನ್ನು ಇದ್ದು. ಕೈ ತೊಳೆಯಲು ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಲಸಿಕಾ ವಿತರಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು.
ಲಸಿಕಾ ವಿತರಣಾ ಕಾರ್ಯಕ್ರಮದಲ್ಲಿ ಪರಿವೀಕ್ಷಣೆ ಹಾಗೂ ಕುಂದು-ಕೊರತೆಗಳಾಗದಂತೆ ಮುನ್ನಚ್ಚೆರಿಕೆ ಕ್ರಮವನ್ನು ವಹಿಸಲು ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅಧಿಕಾರಿಗಳನ್ನು ಉಸ್ತುವಾರಿ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಆನೇಕಲ್ ಸಾರ್ವಜನಿಕ ಆಸ್ಪತ್ರೆಗೆ ಡಾ. ಮನೋಹರ , ಕೆ.ಆರ್.ಪುರಂ ಸಾರ್ವಜನಿಕ ಆಸ್ಪತ್ರೆಗೆ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಣ್ಣೂರಿಗೆ ಡಾ. ನದೀಂ ಅಹಮದ್, ಈಸ್ಟ್ ಪಾಯಿಂಟ್ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಡಾ. ಖಲೀಲ್ ಅಹಮದ್, ಮತ್ತು ಯಲಹಂಕ ಸಾರ್ವಜನಿಕ ಆಸ್ಪತ್ರೆಗೆ ಡಾ. ಚನ್ನಕೃಷ್ಣ ಇವರುಗಳನ್ನು ನೇಮಿಸಲಾಗಿದೆ.
ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಡ್ಡ ಪರಿಣಾಮಗಳ ನಿರ್ವಹಣೆ ಮಾಡಲು ಅರಿವಳಿಕೆ ತಜ್ಞರು ಹಾಗೂ ಚಿಕಿತ್ಸಕರನ್ನು ಕಾರ್ಯಕ್ರಮ ಮುಗಿಯುವರೆಗೆ ಕಾರ್ಯ ಸ್ದಳದಲ್ಲಿ ಲಭ್ಯವಿರುವಂತೆ ಸೂಚಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಆಂಬ್ಯಲೇನ್ಸ್ (108) ವ್ಯವಸ್ಥೆ ಮಾಡಿಕೊಳ್ಳುವುದು ಅಡ್ಡ ಪರಿಣಾಮ ಅಥವಾ ಹೆಚ್ಚಿನ ಚಿಕಿತ್ಸೆ ಅಗತ್ಯ ಇದ್ದಲ್ಲಿ ಸರ್ಕಾರಿ ಮೇಲ್ದರ್ಜೆ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರಗಳಿಗೆ ರವಾನಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.