ಆಟೋ ಚಾಲಕನ ಅಂತ್ಯಕ್ರಿಯೆಯಲ್ಲಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಭಾಗಿ; ಕುಟುಂಬಕ್ಕೆ ಪರಿಹಾರ ವಿತರಣೆ

ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ  ಆಟೋ ಚಾಲಕನ ಮನೆಗೆ ಕುಮಾರಸ್ವಾಮಿಯವರು ಭೇಟಿ ನೀಡಿದ್ದು, ಪಾರ್ಥೀವ ಸರೀರದ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು. 

Published: 17th January 2021 12:37 PM  |   Last Updated: 17th January 2021 01:00 PM   |  A+A-


HD kumaraswamy and Nikhil kumaraswamy

ಆಟೋ ಚಾಲಕನ ಅಂತಿಮ ದರ್ಶನ ಪಡೆದ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್

Posted By : Manjula VN
Source : UNI

ರಾಮನಗರ: ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ  ಆಟೋ ಚಾಲಕನ ಮನೆಗೆ ಕುಮಾರಸ್ವಾಮಿಯವರು ಭೇಟಿ ನೀಡಿದ್ದು, ಪಾರ್ಥೀವ ಸರೀರದ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು. 

ನಿನ್ನೆಯಷ್ಟೇ ಅನಾರೋಗ್ಯದಿಂದ ಆಟೋ ಚಾಲಕ ಜಯರಾಮು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಜಯರಾಮು ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರಬೇಕೆಂದು ಹೇಳಿಕೊಂಡಿದ್ದರು.

ಇದರಂತೆ ಇಂದು ಬೆಳಿಗ್ಗೆ ಕುಮಾರಸ್ವಾಮಿಯವರು ರಾಮನಗರ ಜಿಲ್ಲೆಯ ಬೊಮ್ಮಚ್ಚನ ಹಳ್ಳಿಗೆ ಭೇಟಿ ನೀಡಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಜಯರಾಮು ಅವರ ಅಂತ್ಯಕ್ರಿಯೆಯಲ್ಲಿ ಹೆಚ್.ಡಿ.ಕೆ. ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಾಲ್ಗೊಂಡಿದ್ದರು. ಇಂದು ರಾಮನಗರ ತಾಲೂಕಿನ ಬೊಮ್ಮಚನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp