ರಾಜ್ಯದಲ್ಲಿ ಇಂದು ಅತೀ ಕಡಿಮೆ 435 ಕೊರೋನಾ ಪ್ರಕರಣ ಪತ್ತೆ, 9 ಬಲಿ!
ರಾಜ್ಯದಲ್ಲಿ ಕೆಲ ತಿಂಗಳುಗಳ ಬಳಿಕ ಇದೇ ಮೊದಲ ಬಾರಿಗೆ ಅತೀ ಕಡಿಮೆ ಕೊರೋನಾ ಪ್ರಕರಣ ಪತ್ತೆಯಾಗಿದೆ. ಇಂದು 435 ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,32,432ಕ್ಕೆ ಏರಿಕೆಯಾಗಿದೆ.
Published: 18th January 2021 08:34 PM | Last Updated: 18th January 2021 08:34 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೆಲ ತಿಂಗಳುಗಳ ಬಳಿಕ ಇದೇ ಮೊದಲ ಬಾರಿಗೆ ಅತೀ ಕಡಿಮೆ ಕೊರೋನಾ ಪ್ರಕರಣ ಪತ್ತೆಯಾಗಿದೆ. ಇಂದು 435 ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,32,432ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,175 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 193 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,95,152ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 6 ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 973 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,12,205ಕ್ಕೆ ಏರಿಕೆಯಾಗಿದೆ. ಇನ್ನು 8,033 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 177 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Today's Media Bulletin 18/01/2021
— K'taka Health Dept (@DHFWKA) January 18, 2021
Please click on the link below to view bulletin.https://t.co/QFj74Z4KQS pic.twitter.com/IH7EwKsUDS