ವದಂತಿಗಳಿಗೆ ಕಿವಿಕೊಡದಿರಿ; ಕೋವಿಶೀಲ್ಡ್'ನಷ್ಟೇ ಕೋವ್ಯಾಕ್ಸಿನ್ ಕೂಡ ಸುರಕ್ಷಿತ: ಡಿಸಿಎಂ ಅಶ್ವತ್ಥ್ ನಾರಾಯಣ್

ಲಸಿಕೆ ಕುರಿತ ವದಂತಿಗಳಿಗೆ ಕಿವಿಕೊಡಬೇಡಿ. ಕೋವಿಶೀಲ್ಡ್'ನಷ್ಟೇ ಕೋವ್ಯಾಕ್ಸಿನ್ ಕೂಡ ಸುರಕ್ಷಿತವಾಗಿದೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

Published: 19th January 2021 08:11 AM  |   Last Updated: 19th January 2021 12:50 PM   |  A+A-


Deputy Chief Minister CN Ashwath Narayan

ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್ ನಾರಾಯಣ್

Posted By : Manjula VN
Source : The New Indian Express

ಬೆಂಗಳೂರು: ಲಸಿಕೆ ಕುರಿತ ವದಂತಿಗಳಿಗೆ ಕಿವಿಕೊಡಬೇಡಿ. ಕೋವಿಶೀಲ್ಡ್'ನಷ್ಟೇ ಕೋವ್ಯಾಕ್ಸಿನ್ ಕೂಡ ಸುರಕ್ಷಿತವಾಗಿದೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ಬೆಂಗಳೂರಿನ ಮಲ್ಲೇಶ್ವರದ ಗಾಂಧಿಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಕೋವಿಡ್‌ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಲಸಿಕೆ ಸುರಕ್ಷಿತವಲ್ಲ ಎಂಬುದು ಸತ್ಯವೇ ಆಗಿದ್ದರೆ, ನಾವೇ ಜನರಿಗೆ ಲಸಿಕೆಗಳನ್ನು ನೀಡುತ್ತಿರಲಿಲ್ಲ. ಉತ್ತಮ ಉದ್ದೇಶದೊಂದಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ಪ್ರಮುಖವಾಗಿ ಜನರನ್ನು, ಜನರ ಸುರಕ್ಷತೆಯನ್ನು ಮನದಲ್ಲಿಟ್ಟುಕೊಂಡು ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. 

ಅಡ್ಡ ಪರಿಣಾಮ ಕುರಿತು ಜನರು ಚಿಂತೆಗೀಡಾಗಿದ್ದಾರೆ. ಅಡ್ಡ ಪರಿಣಾಮ ಕುರಿತು ಪ್ರತೀಯೊಬ್ಬರಿಗೂ ಸಂಶಯಗಳಿವೆ. ಅಂತವರು ಸಮಯ ತೆಗೆದುಕೊಂಡೇ ಲಸಿಕೆ ಪಡೆದುಕೊಳ್ಳಲಿ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಲಸಿಕೆ ಪಡೆಯಲು ಮುಂದೆ ಬಂದ ಜನರನ್ನು ಕೊಂಡಾಡಿದ ಅವರು, ಆರೋಗ್ಯ ಕಾರ್ಯಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಮುಂದೆ ನಿಂತೂ ವೈರಸ್ ವಿರುದ್ಧ ಹೋರಾಟ ಮಾಡಿದವರ ರೋಗನಿರೋಧಕ ಶಕ್ತಿ ಹೆಚ್ಚಿಸಬೇಕಿದೆ. ಲಸಿಕೆ ಪಡೆಯುವುದು, ಬಿಡುವುದು ಜನರ ಆಯ್ಕೆಗೆ ಬಿಟ್ಟ ವಿಚಾರ ಎಂದು ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ಕೋವಿಡ್ ಲಸಿಕೆ ಅಭಿಯಾನಕ್ಕೆ ಸಚಿವ ಸುರೇಶ್ ಕುಮಾರ್ ಚಾಲನೆ
ರಾಜಾಜಿನಗರದ ವಿವಿಧ ಆಸ್ಪತ್ರೆಗಳಲ್ಲಿ ಇಂದಿನಿಂದ ಕೊರೋನಾ ವಾರಿಯರ್ಸ್‍ಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಚಾಲನೆ ನೀಡಿದರು.

ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರ,ಕಾಮಾಕ್ಷಿ ಪಾಳ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ದಂತೆ ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವಾರು ಖಾಸಗಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕಾ ಕಾರ್ಯಕ್ರಮಗಳಿಗೆ ಸಚಿವರು ಚಾಲನೆ ನೀಡಿದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp