ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಆದಿತ್ಯ ಆಳ್ವಾಗೆ ಒಂದು ವಾರ ನ್ಯಾಯಾಂಗ ಕಸ್ಟಡಿ

ಸ್ಯಾಂಡಲ್ ವುಡ್ ನಟಿಯರನ್ನು ಒಳಗೊಂಡ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವಾ ಅವರನ್ನು ಒಂದು ವಾರ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ.

Published: 19th January 2021 01:35 PM  |   Last Updated: 19th January 2021 02:05 PM   |  A+A-


ಆದಿತ್ಯ ಆಳ್ವಾ

Posted By : Raghavendra Adiga
Source : Online Desk

ಬೆಂಗಳೂರು: ಸ್ಯಾಂಡಲ್ ವುಡ್ ನಟಿಯರನ್ನು ಒಳಗೊಂಡ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವಾ ಅವರನ್ನು ಒಂದು ವಾರ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ.

ಕಸ್ಟಡಿ ಅವಧಿ ಮುಗಿಯುತ್ತಿದ್ದಂತೆ ಆದಿತ್ಯ ಆಳ್ವಾ ಅವರನ್ನು ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು, ಈ ವೇಳೆ ವಾದ ಆಲಿಸಿದ ನ್ಯಾಯಾಲಯ ಆಳ್ವಾ ಅವರನ್ನು ಮತ್ತೆ ಒಂದು ವಾರ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿತು.

ಆಳ್ವಾ ಅವರನ್ನು ಜನವರಿ 11ರಂದು  ಚೆನ್ನೈನ ಫ್ಲ್ಯಾಟ್ ಒಂದರಿಂದ ಬಂಧಿಸಿ ಕರೆತರಲಾಗಿತ್ತು. ಆಳ್ವಾ ಮಾಜಿ ಸಚಿವ ಜೀವರಾಜ್ ಅಳ್ವಾ ಅವರ ಪುತ್ರ ಮತ್ತು ಬಾಲಿವುಡ್ ಸ್ಟಾರ್ ನಟ ವಿವೇಕ್ ಒಬೆರಾಯ್ ಅವರ ಸೋದರ ಮಾವನಾಗಿದ್ದಾರೆ.

ತನ್ನ ವಿರುದ್ಧ ದಾಖಲಾದ ಪ್ರಕರಣದ ಬಗ್ಗೆ ತಿಳಿದ ನಂತರ ಸೆಪ್ಟೆಂಬರ್‌ನಿಂದ ಭೂಗತವಾಗಿದ್ದ ಆದಿತ್ಯ ಅವರನ್ನು ಬಂಧಿಸಿದ ನಂತರ ಏಳು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ತೆಗೆದುಕೊಳ್ಳಲಾತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದೇ ಪ್ರಕರಣದಲ್ಲಿ ಸೆಲೆಬ್ರಿಟಿಗಳು ಮತ್ತು ವಿಐಪಿಗಳಿಗೆ ಮಾದಕವಸ್ತು ಪೂರೈಸುವಲ್ಲಿ ಭಾಗಿಯಾಗಿದ್ದ ಸಿ ಆಂಬ್ರೋಸ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp