15ನೇ ಹಣಕಾಸು ಆಯೋಗದ ವರದಿಯಂತೆ ರಾಜ್ಯಕ್ಕೆ ರೂ.5,495 ಕೋಟಿ ಅನುದಾನ ಬಿಡುಗಡೆ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
15ನೇ ಹಣಕಾಸು ಆಯೋಗ 2020–21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ರೂ.5,495 ಕೋಟಿ ನೀಡಲು ಶಿಫಾರಸು ಮಾಡಿದೆ. ಈ ಶಿಫಾರಸ್ಸನ್ನು ಒಪ್ಪಿಕೊಂಡು 2021–22 ಸಾಲಿನ ಬಜೆಟ್ನಲ್ಲಿ ವಿಶೇಷ ಅನುದಾನ ಪ್ರಕಟಿಸಬೇಕು ಎಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ.
Published: 19th January 2021 11:16 AM | Last Updated: 19th January 2021 12:59 PM | A+A A-

ಸಿಎಂ ಯಡಿಯೂರಪ್ಪ
ಬೆಂಗಳೂರು: 15ನೇ ಹಣಕಾಸು ಆಯೋಗ 2020–21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ರೂ.5,495 ಕೋಟಿ ನೀಡಲು ಶಿಫಾರಸು ಮಾಡಿದೆ. ಈ ಶಿಫಾರಸ್ಸನ್ನು ಒಪ್ಪಿಕೊಂಡು 2021–22 ಸಾಲಿನ ಬಜೆಟ್ನಲ್ಲಿ ವಿಶೇಷ ಅನುದಾನ ಪ್ರಕಟಿಸಬೇಕು ಎಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ವಿವಿಧ ರಾಜ್ಯಗಳ ಹಣಕಾಸು ಸಚಿವರ ಜತೆ ನಡೆಸಿದ ಬಜೆಟ್ ಪೂರ್ವಭಾವಿ ವಿಡಿಯೊ ಸಂವಾದದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಪ್ರಸ್ತಾವನೆ ಮಂಡಿಸಿದರು.
15ನೇ ಹಣಕಾಸು ಆಯೋಗ 2020–21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ₹ 5,495 ಕೋಟಿ ನೀಡಲು ಶಿಫಾರಸು ಮಾಡಿದೆ. ಈ ಶಿಫಾರಸ್ಸನ್ನು ಒಪ್ಪಿಕೊಂಡು 2021–22 ಸಾಲಿನ ಬಜೆಟ್ನಲ್ಲಿ ವಿಶೇಷ ಅನುದಾನ ಪ್ರಕಟಿಸಬೇಕು. ಇಡೀ ದೇಶದಲ್ಲಿ ಕರ್ನಾಟಕ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯವಾಗಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು.
ರಾಜ್ಯಗಳಿಗೆ ಹಣಕಾಸು ಹಂಚಿಕೆಗೆ 15ನೇ ಹಣಕಾಸು ಆಯೋಗ ನೀಡಿರುವ ಹಂಚಿಕೆ ಸೂತ್ರವನ್ನು ಶೀಘ್ರ ಒಪ್ಪಿದರೆ, ಅದಕ್ಕೆ ಅನುಗುಣವಾಗಿ ರಾಜ್ಯಗಳೂ ಬಜೆಟ್ಗೆ ಸಿದ್ಧತೆ ನಡೆಸಲು ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತಂದರು.
ಕಳೆದ ವರ್ಷದ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಭೀಕರ ಪ್ರವಾಹ ಎದುರಾದಾಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಮೊದಲ ಹಂತದಲ್ಲಿ 1,369 ಕೋಟಿ ಹಾಗೂ ಎರಡನೇ ಹಂತದಲ್ಲಿ 2,261 ಕೋಟಿ ಬಿಡುಗಡೆ ಮಾಡಿತ್ತು. ಉಳಿದ ಹಣವನ್ನು ಕೇಂದ್ರ ಸರ್ಕಾರ ಶೀಘ್ರಗತಿಯಲ್ಲಿ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನನಲ್ಲಿ ಘನತ್ಯಾಜ್ಯ ನಿರ್ವಹಣೆ ಮತ್ತು ಇತರೆ ಪ್ರಮುಖ ಯೋಜನೆಗಳಿಗೆ ಸಹಾಯಕವಾಗಲು ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಬೇಕು.
ಕೃಷ್ಣಾ ಮೇಲ್ದಂಡೆ ಯೋಜನೆ–3 ಅನ್ನು ರೂ.51,148 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಉತ್ತರ ಕರ್ನಾಟಕದ 7 ಜಿಲ್ಲೆಗಳ ಸುಮಾರು 5.94 ಲಕ್ಷ ಹೆಕ್ಟೇರ್ ಪ್ರದೇಶವನ್ನು ನೀರಾವರಿಗೆ ಒಳಪಡಿಸಲಾಗುವುದು. ಅಂದಾಜು 1,21,90,982 ಜನರಿಗೆ ಇದರ ಪ್ರಯೋಜನ ಸಿಗಲಿದೆ ಎಂದು ವಿವರಿಸಿದರು.
ಅದೇ ರೀತಿ ಎತ್ತಿನಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾ ರೂ.₹12,912 ಕೋಟಿ ವೆಚ್ಚ ಮಾಡಿದೆ ಎಂದು ಅವರು ಹೇಳಿದರು.